Home ಬೆಂಗಳೂರು ನಗರ Aero India 2023: ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ

Aero India 2023: ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ

25
0
PM Modi inaugurates Aero India 2023 in Bengaluru
5 ದಿನಗಳ ಕಾಲ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನವನ್ನು ಮೋದಿಯವರು 2ನೇ ಬಾರಿ ಉದ್ಘಾಟಿಸಿದ್ದಾರೆ.

ಬೆಂಗಳೂರು:

ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ (Aero India 2023) ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ. ಮುಂದಿನ 5 ದಿನಗಳ ಕಾಲ ಸಿಲಿಕಾನ್ ಸಿಟಿಯ ನಭದಲ್ಲಿ ಲೋಹದ ಹಕ್ಕಿಗಳ ಕಲರವ ಜೋರಾಗಿರಲಿದೆ.

5 ದಿನಗಳ ಕಾಲ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನವನ್ನು ಮೋದಿಯವರು 2ನೇ ಬಾರಿ ಉದ್ಘಾಟಿಸಿದ್ದಾರೆ.

2021ರಲ್ಲಿ ನಡೆದ 13ನೇ ಆವೃತ್ತಿಯ ವೈಮಾನಿಕ ಪ್ರದರ್ಶನದಲ್ಲಿ 600 ಮಂದಿ ಪ್ರದರ್ಶಕರು ಭಾಗವಹಿಸಿದ್ದರು. ಈ ಸಂಖ್ಯೆ ಪ್ರಸಕ್ತ ವೈಮಾನಿಕ ಪ್ರದರ್ಶನದಲ್ಲಿ 809ಕ್ಕೆ ಹೆಚ್ಚಳವಾಗಿದೆ. ಕಳೆದ ವರ್ಷ 55 ರಾಷ್ಟ್ರಗಳು ಮಾತ್ರ ಪ್ರದರ್ಶನದಲ್ಲಿ ಭಾಗವಹಿಸಿದ್ದು, ಪ್ರಸ್ತುತ 98 ರಾಷ್ಟ್ರಗಳು ತಮ್ಮ ಭಾಗವಹಿಸುವಿಕೆಯನ್ನು ಖಚಿತಪಡಿಸಿವೆ. ಒಟ್ಟು 251 ಒಡಂಬಡಿಕೆ ಸಿದ್ಧಗೊಂಡಿದ್ದು, ಕಳೆದ ವರ್ಷ 23 ಸಾವಿರ ಚದರ ಮೀಟರ್ ವ್ಯಾಪ್ತಿಗೆ ಸೀಮಿತವಾಗಿದ್ದ ಪ್ರದರ್ಶನ ವ್ಯವಸ್ಥೆಯು ಈ ಬಾರಿ 35,000 ಚದರ ಮೀಟರ್ ವ್ಯಾಪ್ತಿಗೆ ವಿಸ್ತರಿಸಿದೆ.

ಕಳೆದ ಬಾರಿ 67 ವಿಮಾನಗಳು ವೈಮಾನಿಕ ಪ್ರದರ್ಶನ ನೀಡಿದ್ದವು. ಈ ಬಾರಿ ಸಾರಂಗ್, ಸೂರ್ಯಕಿರಣ್ ವೈಮಾನಿಕ ಪ್ರದರ್ಶನ ತಂಡ, ಸುಖೋಯ್, ರಫೇಲ್, ತೇಜಸ್ ಸೇರಿದಂತೆ ಒಟ್ಟು 67 ವಿಮಾನಗಳು ಪ್ರದರ್ಶನ ನೀಡಲಿವೆ. ಉಳಿದಂತೆ ಸ್ವ್ಯಾಟಿಕ್ ಡಿಸ್ ಪ್ಲೇಯಲ್ಲಿ 36 ವಿಮಾನಗಳು ಪ್ರದರ್ಶನಗೊಳ್ಳಲಿವೆ.

ಭಾರತ ನಿರ್ಮಿತ ಯುದ್ಧ ವಿಮಾನ, ಹೆಲಿಕಾಪ್ಟರ್ ಹಾಗೂ ತಂತ್ರಜ್ಞಾನಗಳ ಪ್ರದರ್ಶನಕ್ಕಾಗಿಯೇ ಪ್ರತ್ಯೇಕವಾಗಿ ಇಂಡಿಯನ್ ಪೆವಿಲಿಯನ್ ನಿರ್ಮಾಣ ಮಾಡಲಾಗಿದೆ. ಇದರಲ್ಲಿ 115 ಕಂಪನಿಗಳು ಹಾಗೂ 227 ಉತ್ಪನ್ನಗಳ ಪ್ರದರ್ಶನ ನಡೆಯಲಿದೆ. ಇದರಲ್ಲಿ 149 ಉತ್ಪನ್ನಗಳನ್ನು ಭೌತಿಕವಾಗಿಯೇ ಪ್ರದರ್ಶಿಸಲಾಗುತ್ತಿದೆ.

LEAVE A REPLY

Please enter your comment!
Please enter your name here