Home ಅಪರಾಧ ಆಫ್ರಿಕನ್ ಪ್ರಜೆ ಸಾವು: ಆಫ್ರಿಕನ್ ಪ್ರಜೆಗಳಿಂದ ಬೆಂಗಳೂರು ಪೊಲೀಸರ ಮೇಲೆ ಹಲ್ಲೆ

ಆಫ್ರಿಕನ್ ಪ್ರಜೆ ಸಾವು: ಆಫ್ರಿಕನ್ ಪ್ರಜೆಗಳಿಂದ ಬೆಂಗಳೂರು ಪೊಲೀಸರ ಮೇಲೆ ಹಲ್ಲೆ

43
0
African citizen death: Angry fellow citizens attacks on Bengaluru Police
bengaluru

ಬೆಂಗಳೂರು:

ಡ್ರಗ್ಸ್ ಮಾರಾಟ ಆರೋಪದಡಿ‌ ವಶಕ್ಕೆ ಪಡೆಯಲಾಗಿದ್ದ ಆಫ್ರಿಕಾ ಪ್ರಜೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ವಿದೇಶಿ ಪ್ರಜೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ.

ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು ದಾಳಿ ನಡೆಸಿ ಈ ವೇಳೆ 5 ಗ್ರಾಂ ಎಂಡಿಎಂಎ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಎದೆನೋವು ಮತ್ತು ಶೀತ ಇದೆ ಎಂದು ಆಫ್ರಿಕಾ ಪ್ರಜೆ ಪೊಲೀಸರಿಗೆ ತಿಳಿಸಿದ್ದ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ಪೊಲೀಸರು ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಶಕ್ಕೆ ಪಡೆದುಕೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಆತನ ಗುರುತು ಈವರೆಗೂ ಪತ್ತೆಯಾಗಿಲ್ಲ. ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿಸದುಬರಬೇಕಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಇಲ್ಲಿ ಓದಿ: ಪೊಲೀಸರ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು

ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಆಫ್ರಿಕನ್ ಪ್ರಜೆಗಳಯ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೃತ ಆಫ್ರಿಕನ್ ಪ್ರಭೆಯನ್ನು ಬಂಧಿಸಿದ್ದ ಪೊಲೀಸರು ಸ್ಥಳಕ್ಕೆ ಬರುವಂತೆ ಪ್ರತಿಭಟನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here