ಬೆಂಗಳೂರು:
ಡ್ರಗ್ಸ್ ಮಾರಾಟ ಆರೋಪದಡಿ ವಶಕ್ಕೆ ಪಡೆಯಲಾಗಿದ್ದ ಆಫ್ರಿಕಾ ಪ್ರಜೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿದೇಶಿ ಪ್ರಜೆಯೋರ್ವ ಜೆ.ಸಿ.ನಗರ ಪೊಲೀಸರ ವಶದಲ್ಲಿದ್ದರು. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ.
ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 5 ಗ್ರಾಂ ಎಂಡಿಎಂಎ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು.
ಈ ವೇಳೆ ಎದೆನೋವು ಮತ್ತು ಶೀತ ಇದೆ ಎಂದು ಆಫ್ರಿಕಾ ಪ್ರಜೆ ಪೊಲೀಸರಿಗೆ ತಿಳಿಸಿದ್ದನು. ಹೀಗಾಗಿ ತಕ್ಷಣವೇ ಪೊಲೀಸರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.