ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ.ಸುಧಾಕರ್ ಗೆಲುವು ಸಾಧಿಸಿದ ಬೆನ್ನಲ್ಲೇ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.
“ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಒಂದು ಮತದ ಮುನ್ನಡೆ ಸಾಧಿಸಿದದೂ ನಾನು ರಾಜೀನಾಮೆ ನೀಡುತ್ತೇನೆ” ಎಂದು ಪ್ರದೀಪ್ ಈಶ್ವರ್ ಸವಾಲು ಹಾಕಿದ್ದರು. ಇದೀಗ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ ಕೆ.ಸುಧಾಕರ್ ಜಯ ಗಳಿಸಿದ್ದು, ಇದರ ಬೆನ್ನಲ್ಲೇ ಮಂಗಳವಾರ ರಾತ್ರಿ ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್ ಮನೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.