ಬೆಂಗಳೂರು:
ರಾಜ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಬಿ.ಎಸ್.ಯಡಿಯೂರಪ್ಪ, ಮುಂದಿನ ದಿನಗಳಲ್ಲಿ ರಾಜ್ಯಪಾಲ ಹುದ್ದೆ ಸೇರಿದಂತೆ, ಕೇಂದ್ರದಲ್ಲಿ ಯಾವುದೇ ಸ್ಥಾನಮಾನ ವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಮಧ್ಯಾಹ್ನ 12.30ರ ಸುಮಾರಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಲಕಾಲ ಭಾವುಕರಾದರು.
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಹೆಸರನ್ನು ಪ್ರಸ್ತಾಪಿಸುವುದಿಲ್ಲ ಎಂದ ಅವರು, ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.