Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಕೃಷಿ ಬೆಲೆ ಆಯೋಗದ ವರದಿ ಸಲ್ಲಿಕೆ
  • ಬೆಂಗಳೂರು ನಗರ

ಕೃಷಿ ಬೆಲೆ ಆಯೋಗದ ವರದಿ ಸಲ್ಲಿಕೆ

The Bengaluru Live November 23, 2021 8:00 PM 1 minute read
ಕೃಷಿ ಬೆಲೆ ಆಯೋಗದ ವರದಿ ಸಲ್ಲಿಕೆ

ಕೃಷಿ ಬೆಲೆ ಆಯೋಗದ ವರದಿ ಸಲ್ಲಿಕೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ವಿಸ್ತೀರ್ಣ, ಇಳುವರಿ, ಉತ್ಪಾದನೆ, ಸಾಗುವಳಿ ವೆಚ್ಚ ಮತ್ತು ಮಾರುಕಟ್ಟೆ ಬೆಲೆಗಳ ವಸ್ತುಸ್ಥಿತಿ ಹಾಗೂ ಉತ್ಪಾದಕರು ಮತ್ತು ಗ್ರಾಹಕರ ನಡುವಿನ ಬೆಲೆ ಪ್ರಸರಣ ವಿಶ್ಲೇಷಣೆಯ 2020-21ರ ಸಾಲಿನ ವರದಿ ಮತ್ತು ಶಿಫಾರಸುಗಳನ್ನು ಸಲ್ಲಿಸಿದರು.

ವರದಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಕೃಷಿ ಬೆಲೆ ಆಯೋಗದ ಶಿಫಾರಸುಗಳನ್ನು ಕೂಲಂಕಷವಾಗಿ ಪರಿಶೀಲಿಸಿ ರೈತರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.

ಆಯೋಗದ ವರದಿಯಲ್ಲಿ ಕಾರ್ಯಪದ್ಧತಿ, ಉತ್ಪಾದನಾ ವೆಚ್ಚದ ಲೆಕ್ಕಾಚಾರ, ಕೃಷಿ ಪರಿಕರಗಳ ಬಳಕೆ, ಕೃಷಿ ಯಾಂತ್ರೀಕರಣ ಹಾಗೂ ಇಂಧನ ಬೆಲೆ ಏರಿಳಿತದ ಪರಿಣಾಮ, ಕೃಷಿ ಮಾರುಕಟ್ಟೆ ವಸ್ತುಸ್ಥಿತಿ, ಬೆಲೆ ಪ್ರಸರಣ, ರೈತ ಸ್ನೇಹಿ ಬೆಳೆ ವಿಮೆ ಯೋಜನೆಗಳ ಕುರಿತ ವಿಶ್ಲೇಷಣೆ ಹಾಗೂ ಶಿಫಾರಸುಗಳನ್ನು ಮಾಡಲಾಗಿದೆ.

ರಾಜ್ಯದ ಐದು ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಿರುವ ಉತ್ಪಾದನಾ ವೆಚ್ಚ ಮತ್ತು ಮಾರುಕಟ್ಟೆ ಮಾಹಿತಿ ಘಟಕಗಳ ಸಹಯೋಗದಲ್ಲಿ ಆಯೋಗವು ಈ ಕಾರ್ಯವನ್ನು ಕೈಗೊಂಡಿದೆ.

Also Read: Agriculture Price Commission submits report to CM Bommai

ಈ ಸಮೀಕ್ಷೆಯಲ್ಲಿ ಅತಿ ಸಣ್ಣ, ಸಣ್ಣ ರೈತರು, ಅರೆ ಮಧ್ಯಮ , ಮಧ್ಯಮ ರೈತರು ಹಾಗೂ ದೊಡ್ಡ ರೈತರೂ ಸೇರಿದಂತೆ ಒಟ್ಟು 1995 ರೈತರಿಂದ ಮಾಹಿತಿ ಸಂಗ್ರಹಿಸಲಾಗಿದೆ.

ಕೃಷಿ ಯಂತ್ರಗಳಿಂದ ಹಾಗೂ ಸೂಕ್ಷ್ಮ ನೀರಾವರಿಯಿಂದ ಇಳುವರಿ ಸುಸ್ಥಿರಗೊಳಿಸಲು ಸಾಧ್ಯವಾಗಿದೆ ಎಂದು ಆಯೋಗದ ವರದಿ ತಿಳಿಸಿದೆ.

ನಬಾರ್ಡ್ ನಿಯಮಗಳಿಗೆ ಅನುಸಾರವಾಗಿ ಮಾರುಕಟ್ಟೆ ಮೂಲಸಸೌಲಭ್ಯದಡಿ ಹೆಚ್ಚಿನ ಸಂಖ್ಯೆಯ ಗೋದಾಮುಗಳು ಹಾಗೂ ಶೀತಲಗೃಹಗಳನ್ನು ನಿರ್ಮಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ.

ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಉಪಸ್ಥಿತರಿದ್ದರು. (2/2)

— CM of Karnataka (@CMofKarnataka) November 23, 2021

ಕೃಷಿ ಬೆಲೆ ಮುನ್ನಂದಾಜು ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿ, ಮಾಹಿತಿ ನೀಡುವುದರಿಂದ ರೈತರು ಲಾಭದಾಯಕ ಬೆಳೆ ಯೋಜನೆಯನ್ನು ಅನುಸರಿಸಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಕೃಷಿ ಬೆಲೆ ಆಯೋಗವು ಡ್ಯಾಷ್ ಬೋರ್ಡ್ ತಂತ್ರಾಂಶ ಅಭಿವೃದ್ಧಿ ಪಡಿಸಿದೆ ಎಂದು ಆಯೋಗ ತನ್ನ ವರದಿಯಲ್ಲಿ ತಿಳಿಸಿದೆ.

ರೈತರ ಆದಾಯ ವೃದ್ಧಿಸಲು ಸಮಗ್ರ ಕೃಷಿ ಪದ್ಧತಿ ಮತ್ತು ಗ್ರಾಮೀಣ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಬೇಕಾಗಿದೆ. ಅಂತೆಯೇ ಬೆಳೆ ವಿಮೆ ನೋಂದಣಿಯನ್ನು ಕಡ್ಡಾಯಗೊಳಿಸುವುದು ಹಾಗೂ ಬೆಳೆವಿಮೆ ಯೋಜನೆಯನ್ನು ರೈತಸ್ನೇಹಿಯಾಗಿಸಬೇಕು ಎಂದು ತನ್ನ ಶಿಫಾರಸಿನಲ್ಲಿ ತಿಳಿಸಿದೆ.

ಇದರೊಂದಿಗೆ ಮಣ್ಣು, ನೀರಿನ ಸಂರಕ್ಷಣೆ ಮೊದಲಾದ ವಿಷಯಗಳ ಕುರಿತೂ ಸಹ ಆಯೋಗ ತನ್ನ ಶಿಫಾರಸಿನಲ್ಲಿ ಪ್ರಸ್ತಾಪಿಸಿದೆ.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ನಿರ್ದೇಶಕ ಬಿ.ವೈ. ಶ್ರೀನಿವಾಸ್, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಮಳೆಯಿಂದ ಹಾನಿ ಶೀಘ್ರ ಪರಿಹಾರಕ್ಕೆ ಸೂಚನೆ: ಬೊಮ್ಮಾಯಿ
Next: ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಎಂ ಬೊಮ್ಮಾಯಿಗೆ ದೂರವಾಣಿ ಕರೆ

Related Stories

ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM

Latest Post

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ ಬೆಂಗಳೂರಿನ ಎಸ್‌ಎಂವಿಟಿ ಚಾಲನಾ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲಿನ ಪಕ್ಕದಲ್ಲಿ ನಿಂತ ಗಣ್ಯರು
  • Uncategorized
  • ಕರ್ನಾಟಕ

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

November 13, 2026 10:11 PM
ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ IIM ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM
ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನಲ್ಲಿ ಸ್ವಾಗತ
  • ಕರ್ನಾಟಕ
  • ಸಿನಿಮಾ

ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ

November 13, 2026 4:13 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಎಸ್‌ಎಂವಿಟಿ ಚಾಲನಾ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲಿನ ಪಕ್ಕದಲ್ಲಿ ನಿಂತ ಗಣ್ಯರು
  • Uncategorized
  • ಕರ್ನಾಟಕ

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

The Bengaluru Live November 13, 2026 10:11 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ
  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
  • ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ
©Copyright 2025 The Bengaluru Live All rights reserved. | MoreNews by AF themes.