Home ಬೆಂಗಳೂರು ನಗರ ಹಸುಳೆಯ ಅನಾರೋಗ್ಯ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಿದ ಸಿಎಂ ಬೊಮ್ಮಾಯಿ

ಹಸುಳೆಯ ಅನಾರೋಗ್ಯ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಿದ ಸಿಎಂ ಬೊಮ್ಮಾಯಿ

42
0
Ailing infant: CM Bommai arranges for treatment within two hours

ಬೆಂಗಳೂರು:

ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ (Basavaraj Bommai) ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ, ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಅವರ ಗಮನ ಸೆಳೆದಳು.

ಆಕೆಯ ಸಮಸ್ಯೆಯ ಕುರಿತು ವಿಚಾರಿಸಿದಾಗ, ಶಂಕ್ರಮ್ಮನ ಮಗು ಕೃಷ್ಣವೇಣಿ, ದೃಷ್ಟಿ ದೋಷ ಹಾಗೂ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗುವುದು. ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದಳು.

Ailing infant: CM Bommai arranges for treatment within two hours

ಶಂಕ್ರಮ್ಮನ ಮನವಿಗೆ ಕೂಡಲೇ ಸ್ಪಂದಿಸಿದ ಮುಖ್ಯಮಂತ್ರಿಗಳು ಮಗು ಕೃಷ್ಣವೇಣಿಯ ಚಿಕಿತ್ಸೆಗೆ ನೆರವು ನೀಡುವ ಭರವಸೆ ನೀಡಿದರು. ಇದಾಗಿ ಎರಡು ತಾಸಿನೊಳಗೆ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯಿಂದ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ಪತ್ರ ಬರೆದು, ಕೃಷ್ಣವೇಣಿಯ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು.

ಮಗುವಿಗೆ ಸಂಪೂರ್ಣವಾದ ಚಿಕಿತ್ಸೆ ನೀಡಿದ ನಂತರ ಸರ್ಕಾರಕ್ಕೆಬಿಲ್ ಗಳನ್ನು ಸಲ್ಲಿಸುವಂತೆ ಪತ್ರದಲ್ಲಿ ಎಸ್ಡಿಎಂ ಆಸ್ಪತ್ರೆಗೆ ಸೂಚಿಸಲಾಗಿದೆ.

ಮಗುವಿನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ ಮುಖ್ಯಮಂತ್ರಿಗಳ ಮಾತು ಕೆಲವೇ ಗಂಟೆಗಳಲ್ಲಿ ಅಧಿಕೃತ ಭರವಸೆಯಾಗಿದೆ

ಮುಖ್ಯಮಂತ್ರಿಗಳ ಈ ಸ್ಪಂದನೆಗೆ ಮಗುವಿನ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here