Home ಬೀದರ್ ರಾಷ್ಟ್ರದಲ್ಲೇ ಕರ್ನಾಟಕವನ್ನು ಮಾದರಿ ರಾಜ್ಯವಾಗಿ ಮಾಡುವ ಗುರಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ

ರಾಷ್ಟ್ರದಲ್ಲೇ ಕರ್ನಾಟಕವನ್ನು ಮಾದರಿ ರಾಜ್ಯವಾಗಿ ಮಾಡುವ ಗುರಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ

36
0

ಬೀದರ:

ಸರ್ವಾಂಗೀಣ ಅಭಿವೃದ್ಧಿಗೆ ಕಾರ್ಯಕ್ರಮ ಹಾಕಿಕೊಂಡು,ಕರ್ನಾಟಕವನ್ನು ರಾಷ್ಟ್ರ ದಲ್ಲೇ ಮಾದರಿ ರಾಜ್ಯವಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.

ಬೀದರ್ ನಗರದಲ್ಲಿ೨೦ ಕೋಟಿ ರೂಪಾಯಿ ವೆಚ್ಚದಲ್ಲಿ ೧೦೦ ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಹಾಗೂ ಇನ್ನಿತರ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತಿದ್ದರು.ಕೋವಿ ಡ್,ಪ್ರವಾಹ, ಅತಿವೃಷ್ಠಿ,ಹಣಕಾಸಿನ ಸಮಸ್ಯೆಗಳಿಂದ ಈ ವರ್ಷ ನಿರೀಕ್ಷೆಯಂತೆ ಗುರಿಮುಟ್ಟಲಾಗಿಲ್ಲ. ಮುಂದಿನ ದಿನಗಳಲ್ಲಿ ಬೀದರ್ ಜಿಲ್ಲೆ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ರಾಜ್ಯ ಸರ್ಕಾರ ಎಲ್ಲರಿಗೂ ಆರೋಗ್ಯ ಸೇವೆ ನೀಡಲು ಬದ್ಧವಾಗಿದ್ದು,ಮುಂದಿನ ೫ ವರ್ಷದಲ್ಲಿ ರಾಜ್ಯ ಸರ್ಕಾರ ೧೨೫ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ತೆರೆಯುವ ಗುರಿ ಹೊಂದಿದೆ ಎಂದು ಅವರು ಘೋಷಿಸಿದರು.

ಇದೀಗ ಉದ್ಘಾಟನೆಗೊಂಡಿರುವ ನೂರು ಹಾಸಿಗೆಗಳ ಆಸ್ಪತ್ರೆ ಅತ್ಯಾಧುನಿಕ ಆಸ್ಪತ್ರೆಯಾಗಿದ್ದು,೨೪ ಗಂಟೆಯೂ ತಾಯಿ ಮತ್ತು ಮಕ್ಕಳ ಆರೈಕೆ ಮಾಡುತ್ತದೆ.ಈ ನಿಟ್ಟಿನಲ್ಲಿ ಪರಿಣಿತ ವೈದ್ಯರ ತಂಡ ಈ ಆಸ್ಪತ್ರೆಯಲ್ಲಿದೆ ಎಂದು ಮೆಚ್ಚುಗೆಯ ಮಾತನಾಡಿದರು.

ಗರ್ಭಿಣಿ ಮತ್ತು ನವಜಾತ ಶಿಶುಗಳ ಮರಣಗಳ ಅನುಪಾತ ತಗ್ಗಿಸುವುದು ಹಾಗೂ ಗರ್ಭಿಣಿ ಹಾಗೂ ಮಕ್ಕಳಿ ಗೆ ಉತ್ತಮ ಗುಣಮಟ್ಟದ ಸೇವೆ ನೀಡಬೇಕೆಂಬುದು ಎಲ್ಲರ ಆಶಯವಾಗಿದೆ.ಇದರ ಸದುಪಯೋಗ ಪಡೆದು ಕೊಳ್ಳ ಬೇಕೆಂದು ಅವರು ಕರೆ ನೀಡಿದರು.

೨೦೧೮ರ ನೀತಿ ಆಯೋಗದ ಶ್ರೇಯಾಂಕದ ಪ್ರಕಾರ ಕೇರಳ ಮತ್ತು ತಮಿಳುನಾಡು ಬಿಟ್ಟರೆ ಕರ್ನಾಟಕ ಅತ್ಯುತ್ತ ಮ ಆರೋಗ್ಯ ಸೇವೆ ನೀಡುವ ರಾಜ್ಯ ಎಂದು ಹೆಮ್ಮೆಯಿಂದ ನುಡಿದರು.ದೇಶದ ಆರೋಗ್ಯ ಕ್ಷೇತ್ರದ ಸರಾಸರಿ ಅಂ ಕಕ್ಕಿಂತ ರಾಜ್ಯದ ಸರಾಸರಿ ಅಂಕ ಹೆಚ್ಚಿದೆ ಎಂದು ಅವರು ಹೇಳಿದರು.
ಇಲ್ಲಿ ಜನಿಸಿದ ಶರಣ ಸಂಸ್ಕೃತಿಯೂ ಇಡೀ ವಿಶ್ವಕ್ಕೆ ಪಸರಿಸಿ ಈ ನೆಲದ ಮಹತ್ವ ಸಾರಿದೆ ಎಂದು ಬಣ್ಣಿಸುವ ಮೂಲಕ ಶರಣರು-ಸಂತರನ್ನು ಹಾಡಿಹೊಗಳಿದರು.

ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಮಾತನಾಡಿ,ಇಂದು ಖಾಸಗಿ ಆಸ್ಪತ್ರೆಗಳು ಬಡವರಿಗೆ ತುಟ್ಟಿಯಾಗಿ ಪರಿಣಮಿಸಿವೆ.

ಪರಿಣಿತವೈದ್ಯರನ್ನೊಳಗೊಂಡಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬಡವರಿಗೆ ಪೂರಕವಾಗಿದೆ ಎಂದು ಅವರು ಹೇಳಿದರು.

೨೦೦೮ರಲ್ಲಿ ಅಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ೨೦ಕೋಟಿ ರೂಪಾಯಿ ವೆಚ್ಚದಲ್ಲಿ ಆ ಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದ್ದು,ಇಂದು ಅವರೇ ಉದ್ಘಾಟಿಸುತಿರುವುದು ಸಂತಸ ತಂದಿದೆ.ಆರೋಗ್ಯ ಇಲಾ ಖೆ ಮತ್ತು ವೈದ್ಯಕೀಯ ಇಲಾಖೆಗೆ ೨೫೦೦ವೈದ್ಯರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಮುಂದಿನ ೧೫ ದಿನಗಳಲ್ಲಿ ಪ್ರಕ್ರಿಯೆ ಮುಗಿಯಲಿದೆ ಎಂದು ಅವರು ತಿಳಿಸಿದರು.

ಇತರೆ ಕಾಮಗಾರಿಗಳು : ೫.೨೨ ಕೋಟಿ ರೂಪಾಯಿ ವೆಚ್ಚದಲ್ಲಿ ಬೀದರ್ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್, ೪.೯೦ಕೋಟಿ ರೂ.ವೆಚ್ಚದಲ್ಲಿ ಸರ್ಕಾರಿ ಶೂಶ್ರುಷ ಶಾಲೆ,ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿ ಗಳ ವಸತಿ ನಿಲ ಯ ನಿರ್ಮಾಣ,2.50 ಕೋಟಿ ರೂಪಾಯಿ ವೆಚ್ಚದಲ್ಲಿ ಗ್ರಾಮೀಣ ಸಂತೆಗಳ ಅಭಿವೃದ್ಧಿ( ಮನ್ನಳ್ಳಿ,ಕಮಠಾಣಾ ಹಾಗೂ ಬೆನಕನಹಳ್ಳಿ)ಕಾಮಗಾರಿಗಳ ಲೋಕಾರ್ಪಣೆ ಸಹ ಈ ಸಂದರ್ಭದಲ್ಲಿ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಜಮೀಸ್ಥಾನಪುರ ಉಪಪ್ರಾಂಗಣದಲ್ಲಿ ಹ ಮಾಲರಿಗೆ ಮನೆ ನಿರ್ಮಾಣಕ್ಕಾಗಿ ನಿವೇಶನದ ಹಕ್ಕುಪತ್ರಗಳನ್ನು ಮುಖ್ಯಮಂತ್ರಿಗಳು ವಿತರಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವಲಕ್ಷಣ ಸಂಗಪ್ಪ ಸವದಿ,ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ್,ಸಂಸದ ಭಗವಂತ ಖೂಬಾ ,ಜಿಲ್ಲಾ ಪಂಚಾಯತ್ ಅಧ್ಯಕ್ಷ ನಿರ್ಮಲಾ ವೈಜನಾಥ್ ಮಾನೆಗೋಪಾಳೆ, ವಿಧಾನ ಪರಿಷತ್ ಸದಸ್ಯ ರಘುನಾಥ್ ‌ರವ್ ಮಲ್ಕಾಪೂರೆ,ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಕೆ. ಬೆಲ್ದಾಳೆ,ಬೀದರ್ ಶಾಸಕ ರಹೀಮ್ ಖಾನ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ,ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ವಿಜಯಕುಮಾರ್ ಅಣಿಪ್ಪಾ ಪಾಟೀಲ್,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಪಂಕಜ್ ಕುಮಾರ್ ಪಾಂಡೆ,ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿ ಮುಂತಾದವರು ಹಾಜರಿದ್ದರು. UNI

LEAVE A REPLY

Please enter your comment!
Please enter your name here