ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ಮಂಡ್ಯ ತಾಲ್ಲೂಕು ತೂಬಿನಕೆರೆ ಬಳಿ ನಡೆದಿದೆ.
ಕಾರಿನಲ್ಲಿದ್ದ ಸತ್ಯಾನಂದ ರಾಜೇ ಆರಸ್ (51) ಅವರ ಪತ್ನಿ ನಿಶ್ಚಿತಾ (45), ಚಂದ್ರು(62) ಅವರ ಪತ್ನಿ ಸುವೇದಿನಿ ರಾಣಿ(50) ಮೃತರು ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ದುರ್ಘಟನೆ ಸಂಭವಿಸಿದ್ದು, ಬಸ್ ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ದಕ್ಷಿಣ ವಲಯ ಡಿಐಜಿ ಬೋರಲಿಂಗಯ್ಯ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.