Home Uncategorized Allahabad University ಅಲಹಾಬಾದ್ ವಿವಿಯಲ್ಲಿ ಹಿಂಸಾಚಾರ; ಕಲ್ಲುತೂರಾಟ, ಬೈಕ್​​ಗೆ ಬೆಂಕಿ

Allahabad University ಅಲಹಾಬಾದ್ ವಿವಿಯಲ್ಲಿ ಹಿಂಸಾಚಾರ; ಕಲ್ಲುತೂರಾಟ, ಬೈಕ್​​ಗೆ ಬೆಂಕಿ

7
0
Advertisement
bengaluru

ಇಂದು (ಸೋಮವಾರ) ಸಂಜೆ ಅಲಹಾಬಾದ್ ವಿಶ್ವವಿದ್ಯಾನಿಲಯದಲ್ಲಿ (Allahabad University) ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆ ನಡೆದಿದೆ. ಕ್ಯಾಂಪಸ್‌ಗೆ ಪ್ರವೇಶಿಸುವ ಬಗ್ಗೆ ವಾಗ್ವಾದ ನಡೆದು ಅದು ಹಿಂಸಾಚಾರಕ್ಕೆ (Violence) ತಿರುಗಿದೆ. ಈ ವೇಳೆ ವಿದ್ಯಾರ್ಥಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೋಟಾರ್ ಸೈಕಲ್‌ಗೆ ಬೆಂಕಿ ಹಚ್ಚಲಾಗಿದೆ. ಹಿಂಸಾಚಾರದಲ್ಲಿ ಎರಡೂ ಕಡೆಯವರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪೊಲೀಸರು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದರು. ವಿಶ್ವವಿದ್ಯಾನಿಲಯದಲ್ಲಿ ಶುಲ್ಕ ಹೆಚ್ಚಳದ ವಿರುದ್ಧ ತಿಂಗಳ ಕಾಲ ಪ್ರತಿಭಟನೆಯ ಭಾಗವಾಗಿರುವ ವಿದ್ಯಾರ್ಥಿ ನಾಯಕರೊಬ್ಬರು ಕ್ಯಾಂಪಸ್‌ನಲ್ಲಿರುವ ಬ್ಯಾಂಕ್‌ಗೆ ಹೋಗಲು ಬಯಸಿದ್ದರು. ಆದರೆ ಸಿಬ್ಬಂದಿ ಆತನನ್ನು ಒಳಗೆ ಬಿಡಲಿಲ್ಲ. ಇದು ವಾಗ್ವಾದಕ್ಕೆ ಕಾರಣವಾಯಿತು ಎಂದು ಹೇಳಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪ್ರಯಾಗ್‌ರಾಜ್ ಸಿಪಿ ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಪೊಲೀಸರು ಪರಿಸ್ಥಿತಿಯ ನಿಗಾವಹಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಎಡಿಜಿ ಕಾನೂನು ಮತ್ತು ಸುವ್ಯವಸ್ಥೆ ಪ್ರಶಾಂತ್ ಕುಮಾರ್ ಹೇಳಿದ್ದಾರೆ. ವಿಶ್ವವಿದ್ಯಾನಿಲಯದಲ್ಲಿ ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕಳೆದ 101 ದಿನಗಳಿಂದ ವಿದ್ಯಾರ್ಥಿಗಳು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದಾರೆ.

Uttar Pradesh | Protest over fee hike in Allahabad University premises in Prayagraj; motorbike torched, car damaged by protesters; police present at the spot pic.twitter.com/KJ37pgdtK7

— ANI UP/Uttarakhand (@ANINewsUP) December 19, 2022

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

bengaluru bengaluru

bengaluru

LEAVE A REPLY

Please enter your comment!
Please enter your name here