Home ಸಿನಿಮಾ ದಯವಿಟ್ಟು ಥಿಯೇಟರ್​​ಗಳಿಗೆ ಶೇ.100ರಷ್ಟು ಅವಕಾಶ ನೀಡಿ: ಪುನೀತ್​ ರಾಜ್​ಕುಮಾರ್​

ದಯವಿಟ್ಟು ಥಿಯೇಟರ್​​ಗಳಿಗೆ ಶೇ.100ರಷ್ಟು ಅವಕಾಶ ನೀಡಿ: ಪುನೀತ್​ ರಾಜ್​ಕುಮಾರ್​

63
0
bengaluru

ಬೆಂಗಳೂರು:

ದಯವಿಟ್ಟು ಥಿಯೇಟರ್​​ಗಳಿಗೆ ಶೇ.100ರಷ್ಟು ಅವಕಾಶ ನೀಡಿ. ಜನರು ಕೂಡ ಮುನ್ನೆಚ್ಚರಿಕೆ ಕ್ರಮದಿಂದಲೇ ಚಿತ್ರಮಂದಿರಕ್ಕೆ ಬಂದಿರುತ್ತಾರೆ. ಶೇ.50ರಷ್ಟು ಅವಕಾಶ ನೀಡಿದರೆ ನಿರ್ಮಾಪಕರ ಗತಿ ಏನು? ಮುಂದೆ ಏನು ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಮೊದಲೇ ನಮಗೆ ಹೇಳಿದ್ರೆ ಸಿನಿಮಾ ರಿಲೀಸ್​ ಮಾಡುತ್ತಿರಲಿಲ್ಲ ಎಂದು ಪುನೀತ್​ ರಾಜ್​ಕುಮಾರ್​ ಅಸಮಾಧಾನ ಹೊರ ಹಾಕಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೆ ತಂದಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಿಗೆ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಇದಕ್ಕೆ ನಟ ಪುನೀತ್​ ರಾಜ್​ಕುಮಾರ್ ಬೇಸರ ಹೊರ ಹಾಕಿದ್ದಾರೆ.

LEAVE A REPLY

Please enter your comment!
Please enter your name here