
IPS Alok Kumar
ಬೆಂಗಳೂರು:
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಅಲೋಕ್ ಕುಮಾರ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಉಮೇಶ್ ಕುಮಾರ್ ಅವರನ್ನು
ಕ್ರೈಂ ಮತ್ತು ಟೆಕ್ನಿಕಲ್ ಸರ್ವಿಸ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಆರ್ ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೌಮೇಂದು ಮುಖರ್ಜಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.