ಬೆಂಗಳೂರು;- ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ಅಲೋಕ್ ಮೋಹನ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಘಟನೆ ಸಂಬಂಧ ಮಾಲೀಕ ಮತ್ತು ಅವರ ಪುತ್ರನನ್ನು ಬಂಧಿಸಿದ್ದೇವೆ. ಪ್ರಕರಣ ಸಂಬಂಧ ಈಗಾಗಲೇ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಲೀಕ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈಗಾಗಲೇ ಮಾಲೀಕ ಮತ್ತು ಅವರ ಮಗನನ್ನು ಬಂಧಿಸಿದ್ದು, ಇನ್ನುಳಿದ ಮೂವರನ್ನು ಶೀಘ್ರದಲ್ಲೇ ಬಂಧಿಸಲಿದ್ದೇವೆ” ಎಂದು ತಿಳಿಸಿದರು.
ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಿ, ಬೆಂಕಿ ಪಕ್ಕದ ಅಂಗಡಿಗಳಿಗೆ ಹಬ್ಬದಂತೆ ತಡೆದಿದ್ದಾರೆ. ದುರಂತದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಈ ಸಂಬಂಧ ಯಾವೆಲ್ಲ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂಬುದನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುತ್ತೇವೆ. ಘಟನೆ ಕಾರಣ ಏನು ಎಂಬುದು ತನಿಖೆಗಳ ಬಳಿಕವಷ್ಟೇ ಗೊತ್ತಾಗಲಿದೆ” ಎಂದು ಡಿಜಿಪಿ ಮಾಹಿತಿ ನೀಡಿದರು.
ರಾಜ್ಯದಲ್ಲಿ ಎಲ್ಲೆಲ್ಲಿ ಸ್ಫೋಟಕ ಮತ್ತು ಪಟಾಕಿ ಸಾಮಗ್ರಿಗಳಿವೆಯೋ ಅಲ್ಲೆಲ್ಲ ಯಾವ ರೀತಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ ಮತ್ತು ಯಾವ ಲೈಸನ್ಸ್ ಪಡೆದಿದ್ದಾರೆ ಎಂಬುದರ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ನಿಯಮ ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಮುಂದೆ ದುರಂತಗಳು ಸಂಭವಿಸದಂತೆ ನೋಡಿಕೊಳ್ಳುತ್ತೇವೆ” ಎಂದರು.
The post Alok Mohan; ಅತ್ತಿಬೆಲೆ ಪಟಾಕಿ ದುರಂತ ಕೇಸ್, ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ – ಅಲೋಕ್ ಮೋಹನ್ appeared first on Ain Live News.