Home ಬೆಂಗಳೂರು ನಗರ ಜನವರಿ 26ರಂದು ಮಹತ್ವಕಾಂಕ್ಷೆ ಗ್ರಾಮ ಒನ್ ಯೋಜನೆ ಜಾರಿ

ಜನವರಿ 26ರಂದು ಮಹತ್ವಕಾಂಕ್ಷೆ ಗ್ರಾಮ ಒನ್ ಯೋಜನೆ ಜಾರಿ

79
0

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಯೋಜನೆಯ ಸಿದ್ಧತೆ ಕುರಿತು ಸಭೆ

ಬೆಂಗಳೂರು:

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಿವಿಧ ಇಲಾಖೆಗಳ ಸೇವೆಗಳನ್ನು ಒದಗಿಸುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ರಾಮ ಒನ್ ಯೋಜನೆ ರಾಜ್ಯದ 12 ಜಿಲ್ಲೆಗಳಲ್ಲಿ ಗಣರಾಜ್ಯೋತ್ಸವ ದಿನದಂದು ಜಾರಿಗೆ ಬರಲಿದೆ.

ಈ ಯೋಜನೆ ಜಾರಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ವರ್ಚುವಲ್ ಮೂಲಕ ಸಭೆ ನಡೆಯಿತು.

ಈ ಯೋಜನೆ ರಾಜ್ಯದ 12 ಜಿಲ್ಲೆಗಳಲ್ಲಿ ಜಾರಿಯಾಗಲಿದೆ. ಒಟ್ಟು 3000 ಗ್ರಾಮ ಒನ್ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Also Read: ‘Grama One’ offering govt services for citizens to be launched in 12 districts on Republic Day: Karnataka CM

ವರ್ಚುವಲ್ ಸಭೆಯಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ , ಸದ್ಯಕ್ಕೆ 12 ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗಬೇಕು. ಹಲವಾರು ಪ್ರಮುಖ ಇಲಾಖೆಗಳ ಎಲ್ಲಾ ಸೇವೆಗಳು ಗ್ರಾಮೀಣ ಪ್ರದೇಶದ ಜನರಿಗೆ ಸುಲಭವಾಗಿ ಸಿಗುವಂತಾಗಬೇಕು ಎಂದು ಸೂಚನೆ ನೀಡಿದರು.

ಬೀದರ್ , ಕೊಪ್ಪಳ , ಬಳ್ಳಾರಿ, ಬೆಳಗಾವಿ , ಹಾವೇರಿ, ವಿಜಯಪುರ, ದಾವಣಗೆರೆ ,ಶಿವಮೊಗ್ಗ, ತುಮಕೂರು, ಚಿಕ್ಕಮಂಗಳೂರು ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಯಾಗಲಿದೆ.

ಕಂದಾಯ, ಆಹಾರ , ಆರೋಗ್ಯ ಕಾರ್ಮಿಕ ಸೇರಿದಂತೆ ವಿವಿಧ ಇಲಾಖೆಗಳ ಅಂದಾಜು 100 ಸೇವೆಗಳು ಗ್ರಾಮ ಒನ್ ಕೇಂದ್ರದಲ್ಲಿ ಲಭ್ಯವಾಗಲಿವೆ. ಗ್ರಾಮ ಒನ್ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಹಾಗೂ ಅಂತರ್ಜಾಲ- ಇಂಟರ್ನೆಟ್ ಸಂಪರ್ಕ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಈ ಆಡಳಿತ) ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here