Home ಬೆಳಗಾವಿ ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ: ಗಣ್ಯರಿಂದ ಸ್ವಾಗತ

ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ: ಗಣ್ಯರಿಂದ ಸ್ವಾಗತ

44
0

ಬೆಳಗಾವಿ:

ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಬರಮಾಡಿಕೊಳ್ಳಲಾಯಿತು.

IMG 20210117 WA0004

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಗಣ್ಯರನ್ನು ಸ್ವಾಗತಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಮಹೇಶ್ ಕುಮಠಳ್ಳಿ, ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

IMG 20210117 WA0005

ವಿಶೇಷ ವಿಮಾನದಲ್ಲಿ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರು ನಂತರ ಬೆಳಗಾವಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಿದರು.

LEAVE A REPLY

Please enter your comment!
Please enter your name here