
Andhra Pradesh Chief Minister Jagan Mohan Reddy's sister Sharmila met Karnataka DCM DK Shivakumar in Bengaluru
ಬೆಂಗಳೂರು:
ಇಂದು ತೆಲಂಗಾಣ ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರ ಸೋದರಿ ಶರ್ಮಿಳಾ ರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಜಗನ್ ಮೋಹನ್ ರೆಡ್ಡಿ ಸಹೋದರಿ ವೈ. ಎಸ್. ಶರ್ಮಿಳಾ ರೆಡ್ಡಿ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ತೆಲಂಗಾಣ ರಾಜ್ಯದಲ್ಲಿ ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕರು ಅವರು. ಕೆ. ಚಂದ್ರಶೇಖರಾವ್ ಸರ್ಕಾರದ ವಿರುದ್ಧ ಹೋರಾಟಗಳನ್ನು ಮಾಡುವ ಮೂಲಕ ಈ ವರ್ಷ ನಡೆಯುವ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ವೈ. ಎಸ್. ಜಗನ್ ಮೋಹನ್ ರೆಡ್ಡಿ, ಅವರ ಕುಟುಂಬ ರಾಜಕೀಯದ ಹೊರತಾಗಿಯೂ ಕರ್ನಾಟಕದ ಜೊತೆ ಉತ್ತಮ ಬಾಂಧವ್ಯ ಹೊಂದಿದೆ. ಬೆಂಗಳೂರಿನಲ್ಲಿ ಐಷಾರಾಮಿ ಬಂಗಲೆಯನ್ನು ಜಗನ್ ಹೊಂದಿದ್ದಾರೆ. ರಾಜ್ಯದಲ್ಲಿ ಅನೇಕ ಉದ್ಯಮಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.