
Annabhagya Yojana: FCI surplus rice commitment letter released by CM Siddaramaiah on Twitter
ಬೆಂಗಳೂರು:
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ ಕಮಿಟ್ಮೆಂಟ್ ಪತ್ರ ಕೊಟ್ಟಿತ್ತೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕೇಳಿದ್ದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ.
ಭಾರತೀಯ ಆಹಾರ ನಿಗಮ ಕೊಟ್ಟಿರುವ ಕಮಿಟ್ ಮೆಂಟ್ ಪತ್ರ ರಿಲೀಸ್ ಮಾಡಿದ್ದಾರೆ. ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಸವಾಲು ಹಾಕಿದ್ದರು. ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ ಎಂದು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು.
ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ @CTRavi_BJP ಸವಾಲು ಹಾಕಿದ್ದರು.
— Siddaramaiah (@siddaramaiah) June 16, 2023
ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ.
ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ… pic.twitter.com/y6uT7eLXlw
ಸಿ.ಟಿ.ರವಿ ಮತ್ತಿತರ ಮತ್ತು ಬಿಜೆಪಿ ಕರ್ನಾಟಕ ನಾಯಕರು ಮೊದಲು, ಕೇಂದ್ರದ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಕಿಡಿ ಕಾರಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ ಕಮಿಟ್ಮೆಂಟ್ ಪತ್ರ ಕೊಟ್ಟಿತ್ತೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದರು. ಅಕ್ಕಿ ಕಳುಹಿಸುತ್ತೇವೆ ಚೀಲದ ಮೇಲೆ ನಿಮ್ಮ ಹೆಸರು ಹಾಕಿಕೊಂಡು ವಿತರಿಸಿ ಎಂದು ಎಫ್‌ಸಿಐ ಪತ್ರ ನೀಡಿದೆಯೇ? ಸಿದ್ದರಾಮಯ್ಯ ಅವರು ಸುಳ್ಳುರಾಮಯ್ಯ ಅಲ್ಲ ಎನ್ನುವುದಾದರೆ ಕಮಿಟ್ಮೆಂಟ್ ಪತ್ರ ತೋರಿಸಲಿ ಎಂದು ಸವಾಲು ಹಾಕಿದ್ದರು.