Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

The Bengaluru Live July 27, 2024 2:15 PM
ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು, ಜುಲೈ 27 “ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು, ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಕುಮಾರಸ್ವಾಮಿ ಅವರು ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ. ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶವಿದೆ ಮಾಡಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು” ಎಂದು ವಾಗ್ದಾಳಿ ನಡೆಸಿದರು.

“ನಾನು ಬೆಂಗಳೂರು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಅವರು ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾದಾಗಲೂ ಇದು ಬೆಂಗಳೂರಾಗಿಯೇ ಇತ್ತು. ಇದು ನಮ್ಮ ಜಿಲ್ಲೆ. ನಾವು ಭಾರತೀಯರು ಎಂದು ಹೇಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೋ, ಅದೇ ರೀತಿ ನಾವು ಬೆಂಗಳೂರಿನವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದಾಗ ಜಿಲ್ಲೆಯನ್ನು ಒಡೆದು ಬೇರೆ ಹೆಸರು ಕೊಟ್ಟರು” ಎಂದು ತಿಳಿಸಿದರು.

“ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದ್ದು ಬೆಂಗಳೂರಿನಲ್ಲಿ, ರಾಮಕೃಷ್ಣ ಹೆಗಡೆ ಅವರು ಬಂದು ನಿಂತಿದ್ದು ಬೆಂಗಳೂರಿನಲ್ಲಿ. ಈ ಬೆಂಗಲೂರು ನಾಲ್ಕೈದು ಮುಖ್ಯಮಂತ್ರಿಗಳನ್ನು ಮಾಡಿದೆ. ನಮ್ಮ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವಾಗ ಬೆಂಗಳೂರು ಹೆಸರು ಉಳಿಸಿಕೊಳ್ಳುವಂತೆ ನಾವು ಸಲಹೆ ನೀಡಿದ್ದೆವು. ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ನಮ್ಮ ಪೂರ್ವಜರು ಕೊಟ್ಟಿರುವ ಈ ಹೆಸರನ್ನು ನಾವು ಯಾಕೆ ಕಳೆದುಕೊಳ್ಳಬೇಕು?” ಎಂದು ಪ್ರಶ್ನಿಸಿದರು.

“ಈ ಜಿಲ್ಲೆಯ ಆಡಳಿತ ಕೇಂದ್ರ ರಾಮನಗರದಲ್ಲೇ ಇರುತ್ತದೆ. ಈ ಜಿಲ್ಲೆಯ ಜನಕ್ಕೆ ಹೊಸ ದಿಕ್ಕನ್ನು ನೀಡಬೇಕು, ಹೊಸ ಆಲೋಚನೆ, ಅಭಿವೃದ್ಧಿ ನೀಡಬೇಕು, ಮುಂದಿನ ಪೀಳಿಗೆ ದೃಷ್ಟಿಯಿಂದ ನಾವು ಆಲೋಚನೆ ಮಾಡಿ ಈ ತೀರ್ಮಾನ ಮಾಡಿದ್ದೇವೆ. ನಮ್ಮ ಈ ತೀರ್ಮಾನಕ್ಕೆ ಪಕ್ಷಾತೀತವಾಗಿ ಜನರು ಸಂತೋಷವಾಗಿದ್ದಾರೆ” ಎಂದು ತಿಳಿಸಿದರು.

ಕುಮಾರಸ್ವಾಮಿ ಹಣೆಯಲ್ಲಿ ಬರೆದಿಲ್ಲ, 2028ಕ್ಕೆ ಕಾಂಗ್ರೆಸ್ ಸರ್ಕಾರ: 2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು.

ಪ್ರವಾಸೋದ್ಯಮ ಉತ್ತೇಜಿಸಲು ಬೃಂದಾವನವನ್ನು ಮೇಲ್ದರ್ಜೆಗೆ ಏರಿಕೆ: ಕೆಆರ್ ಎಸ್ ಬೃಂದಾವನ ಉದ್ಯಾನವನಕ್ಕೆ ಹೊಸ ರೂಪ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ವಿರೋಧ ಪಕ್ಷಗಳು ಸರ್ಕಾರದ ಹಣ ವ್ಯರ್ಥವಾಗುತ್ತಿದೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಅವರ ಆರೋಪ ಬೋಗಸ್ ಆಗಿದೆ. ಇದು ಸಿದ್ದರಾಮಯ್ಯ ಅವರ ಈ ಹಿಂದಿನ ಸರ್ಕಾರದಲ್ಲಿ ಪ್ರಸ್ತಾವನೆಯಾದ ಯೋಜನೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದಾಗ, ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿತ್ತು. ಈಗ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆ ಮಟ್ಟಕ್ಕೆ ಹೆಚ್ಚಿಸಲು ಮುಂದಾಗಿದ್ದೇವೆ. ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ. ಇದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ. ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತಿದ್ದು, ಪ್ರವಾಸೋದ್ಯಮ ಉದ್ದೇಶದಿಂದ ಈ ಯೋಜನೆಗಳನ್ನು ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು: ಎಲ್ಲಾ ಪಕ್ಷದವರ ಸಲಹೆ, ಅಭಿಪ್ರಾಯ ಸ್ವೀಕರಿಸುತ್ತೇವೆ: ಗ್ರೇಟರ್ ಬೆಂಗಳೂರು ವಿಧೇಯಕವನ್ನು ಬಾಕಿ ಇಡಲಾಗಿದೆ ಎಂದು ಕೇಳಿದಾಗ, “ಎಲ್ಲಾ ಪಕ್ಷದ ಶಾಸಕರು ಈ ವಿಚಾರವಾಗಿ ವಿಸ್ತೃತ ಚರ್ಚೆಯಾಗಬೇಕು ಎಂದು ತಿಳಿಸಿದರು. ಇದಕ್ಕೆ ನಾನು ಮುಕ್ತವಾಗಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯವನ್ನು ಕೇಳಬೇಕು. ಇದರಲ್ಲಿ ಯಾವುದೇ ತಪ್ಪು ಆಗಬಾರದು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಗಮನದಲ್ಲಿಟ್ಟುಕೊಂಡು ಇದನ್ನು ಮಾಡಬೇಕು. ಬೆಂಗಳೂರಿಗೆ ಪರಿಣಾಮಕಾರಿ ಆಡಳಿತ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಇಂದು ಎಲ್ಲಾ ಪಕ್ಷಗಳ ಶಾಸಕರ ಸಭೆ ಕರೆಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸದನ ಸಮಿತಿಯನ್ನು ಸಧ್ಯದಲ್ಲೇ ರಚಿಸಲಾಗುವುದು. ವಿರೋಧ ಪಕ್ಷಗಳ ಸಲಹೆ, ಅಭಿಪ್ರಾಯಗಳನ್ನು ನಾವು ಸ್ವೀಕರಿಸುತ್ತೇವೆ” ಎಂದು ತಿಳಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ
Next: ಬೂತ್ ಗಳಲ್ಲಿ ರಾಜಕೀಯ ಮಾಡೋಣ, ಈಗ ಎಲ್ಲರೂ ಸೇರಿ ಬೆಂಗಳೂರನ್ನು ಕಟ್ಟೋಣ: ಡಿಸಿಎಂ ಡಿ.ಕೆ ಶಿವಕುಮಾರ್ ಕರೆ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM
ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

November 12, 2026 7:04 PM
ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ ಓಕಳಿಪುರಂ ಎಂಟು ಪಥದ ಕಾರಿಡಾರ್ ಬಳಿ ರಾತ್ರಿ ಡಾಂಬರೀಕರಣ ಕಾಮಗಾರಿಯಲ್ಲಿ ರಸ್ತೆ ರೋಲರ್
  • ಬೆಂಗಳೂರು

ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ

November 12, 2026 3:58 PM
ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಕೃಷ್ಣ ಬೈರೇಗೌಡ ಮತ್ತು ಅಧಿಕಾರಿಗಳು
  • ಬೆಂಗಳೂರು

ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ

November 12, 2026 3:50 PM

ನೀವು ತಪ್ಪಿಸಿಕೊಂಡಿರಬಹುದು

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM
bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

The Bengaluru Live November 12, 2026 7:04 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
  • ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್
  • ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ
  • ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ
©Copyright 2025 The Bengaluru Live All rights reserved. | MoreNews by AF themes.