
anti-communal wing to prevent moral policing in Mangalore Commissionerate: G. Parameshwara
ಮಂಗಳೂರು:
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ.
ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಪರಮೇಶ್ವರ್ ಅವರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದ ಗೃಹ ಸಚಿವರು, ಮಂಗಳೂರಿನಲ್ಲಿ ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳನ್ನು ಪರಿಶೀಲಿಸಿದ್ದೇನೆ. ಇದು ನನಗೆ ಹೊಸ ಹುದ್ದೆ ಅಲ್ಲ. ಹೊಸ ಸವಾಲುಗಳು ಹುಟ್ಟಿಕೊಂಡಿವೆ ಮತ್ತು ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪೊಲೀಸ್ ಇಲಾಖೆಗೂ ಹೊಸ ಸವಾಲುಗಳು ಎದುರಾಗಿವೆ ಎಂದರು.
ಕರಾವಳಿ ಭಾಗದಲ್ಲಿ ನೈತಿಕ ಪೊಲಿಸ್ಗಿರಿ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಸಮಾಜದ ಶಾಂತಿ ಕದಡುವವರು ಯಾರೇ ಆದರೂ ಅದನ್ನು ಸಹಿಸುವುದಿಲ್ಲ. ಹೀಗಾಗಿ ಕರಾವಳಿ ಭಾಗದಲ್ಲಿ ಯಾವುದೇ ನೈತಿಕ ಗಿರಿಗೆ ಆಸ್ಪದ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. pic.twitter.com/wbmutr5e1z
— Dr. G Parameshwara (@DrParameshwara) June 6, 2023
ನೈತಿಕ ಪೊಲೀಸ್ಗಿರಿ ತಡೆಯಲು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಎಂಬ ಹೊಸ ಘಟಕ ಸ್ಥಾಪಿಸುತ್ತೇವೆ. ಆ್ಯಂಟಿ ಕಮ್ಯುನಲ್ ವಿಂಗ್ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ ಎಂದರು.
ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಅಂತಾ ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಅಂತಾ ಜನ ಮಾತಾಡ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಇಂದು ಪಶ್ಚಿಮ ವಲಯ ಪೊಲೀಸ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತಾಲಯ, ಮಂಗಳೂರು, ಉಡುಪಿ ಜಿಲ್ಲಾ ಇಲಾಖಾ ಪರಿಶೀಲನಾ ಸಭೆ ನಡೆಸಿ, ಸಲಹೆ ಸೂಚನೆ ನೀಡಿದ್ದೇನೆ. ಸಭೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್, ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. 2/2 pic.twitter.com/GIcU7maVXt
— Dr. G Parameshwara (@DrParameshwara) June 6, 2023
ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದರು.