ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಡಿಸೆಂಬರ್ 3ರಂದು ಆಚರಿಸಲಾಗುವ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ರಾಜ್ಯ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 9 ಕೊನೆಯ ದಿನ.
ಯಾರು ಅರ್ಜಿ ಸಲ್ಲಿಸಬಹುದು
- ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳು.
- ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅಥವಾ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರು.
ಅರ್ಜಿ ಸಲ್ಲಿಸುವುದು ಹೇಗೆ
- ಇಲಾಖೆಯ ಅಧಿಕೃತ ವೆಬ್ಸೈಟ್ www.dwdsc.karnataka.gov.in ಮೂಲಕ ಅರ್ಜಿಯ ನಿಗದಿತ ನಮೂನೆ ಪಡೆಯಬೇಕು.
- ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಗಳಲ್ಲಿ ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು ಇಲ್ಲಿಗೆ ನವೆಂಬರ್ 9ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅದೇ ವಿಳಾಸದ (ಪಿನ್ ಕೋಡ್ 560029) ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 080-29752324ಅನ್ನು ಸಂಪರ್ಕಿಸಬಹುದು. ಪ್ರತಿ ವಲಯದ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನೂ ಸಂಪರ್ಕಿಸಬಹುದು; ಇಮೇಲ್: dwd.ddwo@gmail.com ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
