ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಫಲಾಪೇಕ್ಷಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30, 2026 ಕೊನೆಯ ದಿನ.
ಯಾರು ಅರ್ಜಿ ಸಲ್ಲಿಸಬಹುದು
ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕುಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ಅರ್ಹ ಫಲಾನುಭವಿಗಳು.
ಅರ್ಜಿ ಸಲ್ಲಿಸುವುದು ಹೇಗೆ
ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಸಂಪರ್ಕ
- ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ 217, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು: 29787447.
- ದೇವನಹಳ್ಳಿ ತಾಲ್ಲೂಕು: 27681784.
- ದೊಡ್ಡಬಳ್ಳಾಪುರ ತಾಲ್ಲೂಕು: 27623681.
- ಹೊಸಕೋಟೆ ತಾಲ್ಲೂಕು: 27931528.
- ನೆಲಮಂಗಲ ತಾಲ್ಲೂಕು: 27723172.
ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ಈ ವಿವರ ನೀಡಿದ್ದಾರೆ.
