ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಮಾಡಲಾಗಿದೆ. ಬೆಂಗಳೂರಿನ ಸುರಂಗ ಮಾರ್ಗ, ಟಿಡಿಆರ್ ಸೇರಿದಂತೆ ಪ್ರಮುಖ ಕಾಮಗಾರಿಗಳ ಸೇರಿದಂತೆ 40ಕ್ಕೂ ಹೆಚ್ಚು ಅಭಿವೃದ್ಧಿ ವಿಷಯಗಳ ಮೇಲೆ ಚರ್ಚೆ ಮಾಡಲಾಗಿದೆ.
ಆ ನಂತರ ಮಾಧ್ಯಮಗಳ ಜೊತೆ ಕಾನೂನು ಸಚಿವ ಎಚ್ ಕೆ ಪಾಟೀಲ್ ಮಾತನಾಡಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ರಸ್ತೆಯ ವರೆಗಿನ 12690ಕೋಟಿ ವೆಚ್ಚದ ಸುರಂಗ ರಸ್ತೆ ಮಾರ್ಗದ ಯೋಜನೆಗೆ ಒಪ್ಪಿಗೆ ಸಿಕ್ಕಿದೆ.
ಹಾಗೆ ಬೆಂಗಳೂರಲ್ಲಿ 250 ಅಡಿ ಎತ್ತರದ ಆಕಾಶ ಗೋಪುರ ವನ್ನು 500 ಕೋಟಿ ವೆಚ್ಚದಲ್ಲಿ ಒಪ್ಪಿಗೆಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆಯನ್ನು ಇಂಧನ ಉಳಿತಾಯ ಕೇಂದ್ರಿಕೃತ ನಿಯಂತ್ರಣ ಮತ್ತು ಮೇಲ್ವಿಚಾರಣೆ ವ್ಯವಸ್ಥೆ ಅಡಿಯಲ್ಲಿ ಎಲ್ಇಡಿ ಬೀದಿ ದೀಪಗಳ ಅಳವಡಿಸುವುದು
ಹಾಗು 7 ವರ್ಷಗಳ ನಿರ್ವಹಣಾ ವೆಚ್ಚವಾದ ರೂ 684.34 ಕೋಟಿ ವೆಚ್ಚದಲ್ಲಿ ಅನುಮೋದನೆ ಬೆಂಗಳೂರಿನಲ್ಲಿ 52 ಹೊಸ ಇಂದಿರಾ ಕ್ಯಾಂಟೀನ್ ಗಳು ನಿರ್ಮಿಸಲು ಒಪ್ಪಿಗೆ ಸಿಕ್ಕಿದೆ ಎಂದು ಹೇಳಿದರು.
