ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ.
ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ‘ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ’ (ARAI) ಟೆಸ್ಟಿಂಗ್ ಕೇಂದ್ರ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನವೆಂಬರ್ 28ರಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಅನುಮೋದನೆ ನೀಡಿದೆ ಎಂದು ಅವರು X ನಲ್ಲಿ ಪ್ರಕಟಿಸಿದ್ದಾರೆ.

ಕೇಂದ್ರಕ್ಕೆ ಭೂ ಮಂಜೂರಾತಿ ವಿಷಯದ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಸ್ತೃತ ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ARAI ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳು ಹಾಗೂ ಜಿಲ್ಲೆಯ ಪ್ರಮುಖ ಮುಖಂಡರು ಭಾಗವಹಿಸಿದ್ದರು.
