ಹಾಸನ:
ಅರಸಿಕೆರೆಯ ಹಾಲಿ ಶಾಸಕ ಜೆಡಿಎಸ್ ನ ಶಿವಲಿಂಗೇಗೌಡ ಕಾಂಗ್ರೆಸ್ ಸೇರಲು ನಿರ್ಧರಿಸಿರುವುದಾಗಿ ಗುರುವಾರ ಘೋಷಿಸಿದ್ದಾರೆ.
ತಮ್ಮ ಬೆಂಬಲಿಗರು, ಅನುಯಾಯಿಗಳ ಆಶಯದಂತೆ ಕಾಂಗ್ರೆಸ್ ಸೇರಲು ನಿರ್ಧರಿಸಿರುವುದಾಗಿ ಶಿವಲಿಂಗೇಗೌಡ ಹೇಳಿದ್ದಾರೆ. ಸ್ಥಳೀಯ ನಾಯಕರು ಹಾಗೂ ಅನುಯಾಯಿಗಳೊಂದಿಗಿನ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಶಿವಲಿಂಗೇಗೌಡ ಪತ್ರಕರ್ತರಿಗೆ ತಿಳಿಸಿದ್ದಾರೆ.
ಶಿವಲಿಂಗೇಗೌಡ ಕಾಂಗ್ರೆಸ್ ಗೆ ಸೆರ್ಪಡೆಯಾದರೆ, 2023 ರ ಚುನಾವಣೆಯಲ್ಲಿ ಸಾಮೂಹಿಕವಾಗಿ ಬೆಂಬಲಿಸುವುದಾಗಿ ಬೆಂಬಲಿಗರು ಘೋಷಿಸಿದ್ದಾರೆ. ವಿಪಕ್ಷ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶಿವಲಿಂಗೇ ಗೌಡ ಕಾಂಗ್ರೆಸ್ ಸೇರಲಿದ್ದಾರೆ.
ಮಾ.05 ರಂದು ಸಿದ್ದರಾಮಯ್ಯ ಅರಸಿಕೆರೆಗೆ ಭೇಟಿ ನೀಡುತ್ತಿದ್ದು, ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಉದ್ಘಾಟಿಸಲಿದ್ದಾರೆ. ಅಂದು ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.