ಶಿವಮೊಗ್ಗ:
ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಮೂರನೇ ಎರಡರಷ್ಟು ಸ್ಥಾನಗಳಲ್ಲಿ ಗೆದ್ದು ಪಕ್ಷ ಅಧಿಕಾರಕ್ಕೇರಲಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಆದ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರಣದ ಪ್ರೇರಣಾ ಸಭಾಂಗಣದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ವಿಶೇಷ ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷವನ್ನು ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ತರಲು ಪರಿಶ್ರಮ ಮತ್ತು ಪ್ರವಾಸ ಅತ್ಯಗತ್ಯ. ತಿಂಗಳಲ್ಲಿ ಏಳು ದಿನ ಕಾರ್ಯಕರ್ತರನ್ನು ಭೇಟಿ ಮಾಡಿ ಮತ್ತು ಪಕ್ಷಕ್ಕಾಗಿ ನಿಮ್ಮನ್ನು ತೊಡಗಿಸಿಕೊಳ್ಳಿ ಎಂದು ಮನವಿ ಮಾಡಿದರು.
शिवमोगा, कर्नाटक में सम्पन्न हुई प्रदेश कार्यकारणी के समापन सत्र को सम्बोधित किया। एक सशक्त संगठन के रूप में यह हमारी जिम्मेदारी है कि हमारी सरकार द्वारा जनहित में हो रहे कार्यों की जानकारी जनता तक पहुँचे तथा हर बूथ पर भाजपा को मजबूत करे। pic.twitter.com/seWiE4Dd31
— Arun Singh (@ArunSinghbjp) January 3, 2021
ದೇಶದ ಅಭಿವೃದ್ಧಿಗಾಗಿ ಒಂದು ದೇಶ ಒಂದು ತೆರಿಗೆ ಇರಬೇಕು. ಹಾಗೆಯೃ ಒಂದು ದೇಶ ಒಂದೇ ಚುನಾವಣೆ ಬಗ್ಗೆ ಚರ್ಚೆ ನಡೆಸಲು ಇದು ಸಕಾಲ ಎಂದು ಅಭಿಪ್ರಾಯಪಟ್ಟರು. ಈಗ ಹೆಚ್ಚಿನ ಸಮಯವನ್ನು ನಾವು ಚುನಾವಣೆಗೆ ಮೀಸಲಾಗಿ ಇಡಬೇಕಾಗುತ್ತಿದೆ. ಚುನಾವಣಾ ಕಾರ್ಯದಿಂದ ಶಿಕ್ಷಕರು, ಪೊಲೀಸ್ ವ್ಯವಸ್ಥೆ ತೊಂದರೆಗೆ ಸಿಲುಕುತ್ತದೆ. ಅಭಿವೃದ್ಧಿ ಕಾರ್ಯ ಸ್ಥಗಿತಗೊಳ್ಳುತ್ತದೆ ಎಂದು ಅವರು ವಿವರಿಸಿದರು.