ಬೆಂಗಳೂರು:
ನಟ, ಉತ್ತಮ ಪ್ರಜಾಕೀಯ ಪಕ್ಷ (UPP) ಸಂಸ್ಥಾಪಕ ಉಪೇಂದ್ರ ವಿರುದ್ಧ ಅಟ್ರಾಸಿಟಿ ದೂರು ದಾಖಲಿಸಿದ್ದಾರೆ.
UPP ಸ್ಥಾಪನೆಯಾಗಿ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಪ್ರಜಾಕೀಯ ದಿನ’ ಆಚರಣೆ ಪ್ರಯುಕ್ತ ಫೇಸ್ ಬುಕ್ ನಲ್ಲಿ ಲೈವ್ ಬಂದಿದ್ದ ಉಪೇಂದ್ರ ಯಾವುದೋ ಮಾತಿಗೆ ‘ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ’ ಎಂದು ಹೇಳಿದ್ದು ಈ ಮಾತಿಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ.
ಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾ ಹಾಗೆ:: ಉಪೇಂದ್ರ (ಪ್ರಜಾಕೀಯ)
— DEEPU GOWDRU (@DEEPUVAJRAMUNI) August 12, 2023
ಅಲ್ಲ ಈತನ ಯಾವುದೋ ಒಂದು ಪಕ್ಷದ ಸಿದ್ದಾಂತದ ವಿರುದ್ಧ ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರೆ, ಆ ಜನರನ್ನು "ಹೊಲ್ಗೇರಿ"ಗೆ ಹೊಲಿಸೋದು ಎಷ್ಟರ ಮಟ್ಟಕ್ಕೆ ಸರಿ..?? ಹಾಗಾದರೆ ಈ ಮನುಷ್ಯನ ಪ್ರಕಾರ ಹೊಲ್ಗೇರಿಯಲ್ಲಿ ಬದುಕುವ ಜನರೆಲ್ಲರು ಕೆಟ್ಟವರಾ..??#prajakeeya pic.twitter.com/jarIHwCHDN
ಈ ಹೇಳಿಕೆಯನ್ನು ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಎಂಬುವರು ಸಿಕೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ತಮ್ಮ ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಉಪೇಂದ್ರ ವಿಡಿಯೋವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿದ್ದೇನು. ನನ್ನ ಹೇಳಿಕೆಗೆ ಕ್ಷಮೆಯಿರಲಿ ಎಂದು ಕ್ಷಮಾಪಣೆ ಕೇಳಿದ್ದಾರೆ.