ಬೆಂಗಳೂರು:
ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಆಕಸ್ಮಿಕ ಬೆಂಕಿಗೆ ಬಾಲಾಜಿ ಕ್ರಾಕರ್ಸ್ ಮಳಿಗೆಯಲ್ಲಿ ಹೊತ್ತಿ ಉರಿದಿದ್ದು 12 ಜನ ಕಾರ್ಮಿಕರ ಸಜೀವದಹನವಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಲಾರಿಯಲ್ಲಿ ಪಟಾಕಿ ಇಳಿಸು ಅಥವಾ ಲೋಡ್ ಮಾಡುವಾಗ ಆಕಸ್ಮಿಕ ಬೆಂಕಿ ತಗುಲಿ ಪಟಾಕಿ ಅಂಗಡಿ ಹೊತ್ತಿ ಉರಿದಿದ್ದು 1 ಕ್ಯಾಂಟ್ರೋ, 2 ಬೊಲೆರೋ, 4 ಬೈಕ್ಗಳು ಸಹ ಬೆಂಕಿಗಾಹುತಿ ಆಗಿವೆ.
ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಬಾಲಾಜಿ ಕ್ರಾಕರ್ಸ್ ಮಳಿಗೆಯಲ್ಲಿ ಕ್ಯಾಂಟರ್ನಲ್ಲಿ ಪಟಾಕಿ ಅನ್ ಲೋಡ್ ಮಾಡುವ ವೇಳೆ ಬೆಂಕಿ ಹೊತ್ತಿಕೊಂಡಿದ್ದು ಮಳಿಗೆಯ ಮಾಲೀಕ ನವೀನ್ಗೂ ಸುಟ್ಟ ಗಾಯಗಳಾಗಿವೆ. ಸದ್ಯ ಹೊತ್ತಿಕೊಂಡ ಬಗ್ಗೆ ಖಚಿತ ಮಾಹಿತಿ ಇಲ್ಲ. ಪರಿಶೀಲನೆಗಾಗಿ ಎಫ್ಎಸ್ಎಲ್ ತಂಡ ಆಗಮಿಸಲಿದೆ. ಮಳಿಗೆ ಪರವಾನಗಿ ಬಗ್ಗೆಯು ಪರಿಶೀಲನೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.