Home ಕ್ರೀಡೆ ಇಂಗ್ಲೆಂಡ್​ ವಿರುದ್ಧ 36 ರನ್ ಗಳಿಂದ ಗೆದ್ದು ಆಸ್ಟ್ರೇಲಿಯಾ

ಇಂಗ್ಲೆಂಡ್​ ವಿರುದ್ಧ 36 ರನ್ ಗಳಿಂದ ಗೆದ್ದು ಆಸ್ಟ್ರೇಲಿಯಾ

19
0

ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಇಂಗ್ಲೆಂಡ್​ ವಿರುದ್ಧ 36 ರನ್ ಗಳಿಂದ ಗೆದ್ದು ಬೀಗಿದೆ.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕರಾದ ಟ್ರಾವಿಸ್ ಹೆಡ್ ಹಾಗೂ ಡೇವಿಡ್ ವಾರ್ನರ್ ಬಿರುಸಿನ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್​ಗೆ ಕೇವಲ 5 ಓವರ್​ಗಳಲ್ಲಿ 70 ರನ್ ಪೇರಿಸಿದ ಬಳಿಕ ಡೇವಿಡ್ ವಾರ್ನರ್ (39) ಔಟಾದರು. ಮತ್ತೊಂದೆಡೆ ಟ್ರಾವಿಸ್ ಹೆಡ್ 34 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ನಾಯಕ ಮಿಚೆಲ್ ಮಾರ್ಷ್ 35 ರನ್​ಗಳ ಕೊಡುಗೆ ನೀಡಿದರೆ, ಗ್ಲೆನ್ ಮ್ಯಾಕ್ಸ್​ವೆಲ್ 28 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ ಮಾರ್ಕಸ್ ಸ್ಟೋಯಿನಿಸ್ 17 ಎಸೆತಗಳಲ್ಲಿ 30 ರನ್ ಸಿಡಿಸಿದರು.

ಹಾಗೆಯೇ ಮ್ಯಾಥ್ಯೂ ವೇಡ್ 10 ಎಸೆತಗಳಲ್ಲಿ 17 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು. ಅದರಂತೆ ಆಸ್ಟ್ರೇಲಿಯಾ ತಂಡವು ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು. 202 ರನ್​ಗಳ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಫಿಲ್ ಸಾಲ್ಟ್ ಹಾಗೂ ಜೋಸ್ ಬಟ್ಲರ್ ಅತ್ಯುತ್ತಮ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್​ಗೆ 73 ರನ್​ಗಳ ಜೊತೆಯಾಟವಾಡಿದ ಬಳಿಕ ಸಾಲ್ಟ್ (37) ನಿರ್ಗಮಿಸಿದರು. ಮತ್ತೊಂದೆಡೆ 28 ಎಸೆತಗಳಲ್ಲಿ 42 ರನ್ ಚಚ್ಚುವ ಮೂಲಕ ಜೋಸ್ ಬಟ್ಲರ್ ಅಬ್ಬರಿಸಿದ್ದರು.

ಆದರೆ ಆರಂಭಿಕರಿಬ್ಬರ ನಿರ್ಗಮನದ ಬಳಿಕ ಇಂಗ್ಲೆಂಡ್ ತಂಡ ರನ್​ ಗತಿ ಕಡಿಮೆಯಾಯಿತು. ವಿಲ್ ಜಾಕ್ಸ್ ಕೇವಲ 10 ರನ್​ಗಳಿಸಿ ಔಟಾದರೆ, ಜಾನಿ ಬೈರ್​ಸ್ಟೋವ್​ 7 ರನ್​ಗಳಿಸಲಷ್ಟೇ ಶಕ್ತರಾದರು. ಇನ್ನು ಮೊಯೀನ್ ಅಲಿ (25) ಹಾಗೂ ಹ್ಯಾರಿ ಬ್ರೂಕ್ (20) ಅತ್ಯಲ್ಪ ಕೊಡುಗೆ ನೀಡಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಪರಿಣಾಮ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 165 ರನ್​ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 36 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ಗ್ರೂಪ್-ಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ, ಇಂಗ್ಲೆಂಡ್ ತಂಡವು 4ನೇ ಸ್ಥಾನಕ್ಕೆ ಕುಸಿದಿದೆ.

LEAVE A REPLY

Please enter your comment!
Please enter your name here