ಬೆಂಗಳೂರು:
ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಸ್ಥಿತಿಯಲ್ಲಿದ್ದಾರೆ.
ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಸಂಚಾರಿ ವಿಜಯ್ಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಬಿಡುಗಡೆಗೊಳಿಸಿರುವ ಹೆಲ್ತ್ ಬುಲೆಟಿನ್ನಲ್ಲಿ ಮಾಹಿತಿ ನೀಡಿದ್ದಾರೆ.
ನಿನ್ನೆ ಸ್ನೇಹಿತರ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿದೆ. ಕೂಡಲೇ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು.

ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದರಿಂದ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ, ಮೆದುಳಿನ ಭಾಗದಲ್ಲಿ ಉಂಟಾದ ರಕ್ತಸ್ರಾವದಿಂದ ಗಂಭೀರವಾಗಿತ್ತು. ಕೂಡಲೇ ಶಸ್ತ್ರಚಿಕಿತ್ಸೆ ಮಾಡಿ ಮೆದುಳಿನಲ್ಲಿನ ರಕ್ತಸ್ರಾವ ತೆಗೆಯಲಾಗಿದೆ. ಸದ್ಯ ನಟ ಸಂಚಾರಿ ವಿಜಯ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಎಲ್ಲಾ ಜೀವ ರಕ್ಷಕ ವಿಧಾನದ ಮೂಲಕ, ನ್ಯೂರೋ ಐಸಿಯುನಲ್ಲಿ ಇದ್ದಾರೆ. ನಾವು ಅತ್ಯುತ್ತಮ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಪೋಲೊ ಆಸ್ಪತ್ರೆಯಿಂದ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.