Home ಅಪರಾಧ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ

82
0

ಬೆಂಗಳೂರು:

ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶನಿವಾರ (ಜೂ.12) ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಅವರಿಗೆ ಆಕ್ಸಿಡೆಂಟ್​ ಆಗಿತ್ತು. ಸ್ನೇಹಿತ ನವೀನ್​ ಅವರ ಬೈಕ್​ನಲ್ಲಿ ಹಿಂಬದಿ ಕುಳಿತು ವಿಜಯ್​ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಅವರು ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. 36 ಗಂಟೆಗಳು ಕಳೆದರೂ ಅವರ ದೇಹ ಚಿಕಿತ್ಸೆಗೆ ಸ್ಪಂದಿಸಿಲ್ಲ.

ಕಿಚ್ಚ ಸುದೀಪ್ ಸಂತಾಪ

ನಟ ಸಂಚಾರಿ ವಿಜಯ್ ನಿಧನರಾಗಿದ್ದು, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ.

ಸಿ.ಎಂ. ಸಂತಾಪ

LEAVE A REPLY

Please enter your comment!
Please enter your name here