ಬೆಂಗಳೂರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಹಾಗೂ ಅಲ್ಲಿ ದೊರೆಯುವ ಸೇವೆಗಳ ಕುರಿತು ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ವಿಶೇಷ ಜಾಗೃತಿ ಅಭಿಯಾನಕ್ಕೆ ಬೆಂಗಳೂರು ನಗರದ ಜಿಲ್ಲಾಧಿಕಾರಿಗಳಾದ ಜೆ ಮಂಜುನಾಥ್ ಅವರು ಇಂದು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ ಮತ್ತು ಎಲ್ಇಡಿ ವ್ಯಾನ್ ಹಾಗೂ ಕೇಬಲ್ ವಾಹಿನಿ ಮೂಲಕ ಜಿಲ್ಲೆಯ ನಾಲ್ಕೂ ತಾಲ್ಲೂಕುಗಳ ಆಯ್ದ ಗ್ರಾಮಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ. ಶ್ರೀನಿವಾಸ್ ಜಿ ಎ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ. ಎನ್ ಮನೋಹರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗಳಾದ ಖಲೀಲ್ ಅಹ್ಮದ್, ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.