Home ಬಾಗಲಕೋಟ ಕೋವಿಶೀಲ್ಡ್ ಲಸಿಕೆ ಪಡೆದ ಬಾಗಲಕೋಟೆ ಸಿಇಓ ಟಿ. ಭೂಬಾಲನ್

ಕೋವಿಶೀಲ್ಡ್ ಲಸಿಕೆ ಪಡೆದ ಬಾಗಲಕೋಟೆ ಸಿಇಓ ಟಿ. ಭೂಬಾಲನ್

354
0

ಬಾಗಲಕೋಟೆ:

ನವನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ಅವರು ಕೋವಿಶಿಲ್ಡ್ ಲಸಿಕೆಯನ್ನು ಪಡೆದರು. ಅವರ ಜೊತೆ ಜಿ.ಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಲಸಿಕೆಯನ್ನು ಪಡೆದರು.

ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಿದ ಕಾರ್ಯಕರ್ತೆಯರಿಗೆ ಕೋವಿಡ್ ಲಸಿಕೆ ನೀಡುವ ಎರಡನೇ ಹಂತದ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರೆತಿದೆ. ಎರಡನೇ ಹಂತದಲ್ಲಿ ಜಿಲ್ಲೆಯಲ್ಲಿ ಒಟ್ಟು 6876 ಜನ ಹೆಸರು ನೊಂದಾಯಿಸಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯ 844, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆಯ 2310, ಪೊಲೀಸ್ ಇಲಾಖೆಯ 2792, ಪೌರಾಡಳಿತ ಇಲಾಖೆಯ 930 ಇದ್ದಾರೆ.

Bagalkot zp ceo IAS T Bhoobalan takes covishield

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಅವರು ಫೆಬ್ರವರಿ 8 ರಿಂದ ಮೂರು ದಿನಗಳ ಕಾಲ ಎರಡನೇ ಹಂತದ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು, ನೊಂದಾಯಿಸಿಕೊಂಡ ಪ್ರತಿಯೊಬ್ಬರು ಕೋವಿಶೀಲ್ಡ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕೆಂದು ಮನವಿ ಮಾಡಿದರು. ಜಿಲ್ಲೆಯಲ್ಲಿ 20 ಕೇಂದ್ರಗಳಲ್ಲಿ ಕೋವಿಶಿಲ್ಡ್ ಲಸಿಕೆ ಹಾಕಲಾಗುತ್ತಿದೆ. ಸೋಮವಾರ ಒಟ್ಟು 585 ಜನ ಲಸಿಕೆ ಪಡೆದ್ದಾರೆ. ಅದರಲ್ಲಿ ಹೆಲ್ತಕೇರ್ ವರ್ಕರ್ಸ್ 90 ಹಾಗೂ ಪ್ರಾಂಟ್ ಲೈನ್ ವರ್ಕರ್ಸ್ 495 ಜನ ಇದ್ದಾರೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಕೋವಿಡ್ ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಿ.ಎಸ್.ಜವಳಿ ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here