Bajrang Dal Ban: DK Shivakumar visits Anjaneya Temple and offers special pooja
ಬೆಂಗಳೂರು:
ಬಜರಂಗ ದಳ ನಿಷೇಧ ಮಾಡುವ ವಿವಾದ ತಾರಕ್ಕೇರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು ಆಂಜನೇಯ ದೇವಾಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ವಿವಾದ ತಾರಕ್ಕೇರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಇಂದು ಹನುಮನ ದೇವಾಲಯಕ್ಕೆ ಭೇಟಿ ನೀಡಿದ್ದು, ಬಜರಂಗಬಲಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕೆ.ಆರ್.ಮಾರುಕಟ್ಟೆಯಲ್ಲಿರುವ ಆಂಜನೇಯ ದೇವಾಸ್ಥಾನಕ್ಕೆ ಭೇಟಿ ನೀಡಿರುವ ಡಿಕೆ.ಶಿವಕುಮಾರ್ ಅವರು, ಪೂಜೆ ಸಲ್ಲಿಸಿದರು.
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇಗುಲಕ್ಕೆ ಇಂದು ಭೇಟಿ ನೀಡಿ ವಾಯುಪುತ್ರನ ದರ್ಶನ ಪಡೆದೆ. ಸೇವೆ, ಸ್ವಾಮಿ ನಿಷ್ಠೆಗೆ ಹೆಸರಾದ ಪ್ರಭು ಶ್ರೀ ಆಂಜನೇಯ ಸಕಲರಿಗೂ ಒಳಿತುಂಟುಮಾಡಲಿ. pic.twitter.com/whnjGMTNlG
— DK Shivakumar (@DKShivakumar) May 9, 2023
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇಗುಲಕ್ಕೆ ಇಂದು ಭೇಟಿ ನೀಡಿ ವಾಯುಪುತ್ರನ ದರ್ಶನ ಪಡೆದೆ. ಸೇವೆ, ಸ್ವಾಮಿ ನಿಷ್ಠೆಗೆ ಹೆಸರಾದ ಪ್ರಭು ಶ್ರೀ ಆಂಜನೇಯ
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿತ್ತು. ಕಾಂಗ್ರೆಸ್ ಪಕ್ಷ ಈ ಭರವಸೆ ಬಿಜೆಪಿ ನಾಯಕರ ಹಾಗೂ ಹಿಂದು ಸಂಘಟನೆಗಳ ಕಣ್ಣು ಕೆಂಪಗಾಗುವಂತೆ ಮಾಡಿದೆ.
ಹೀಗಾಗಿ ಕಾಂಗ್ರೆಸ್ ವಿರುದ್ಧ ರಾಜ್ಯದಾದ್ಯಂತ ಹನುಮಾನ್ ಚಾಲೀಸಾ ಪಠಣಕ್ಕೆ ಹಿಂದೂಪರ ಸಂಘಟನೆಗಳು ಕರೆ ನೀಡಲಾಗಿದ್ದು, ಅದರಂತೆ ಕಳೆದ ಗುರುವಾರ(ಮೇ 04)ದಿಂದ ರಾಜ್ಯದ ವಿವಿಧ ದೇವಾಲಯಗಲ್ಲಿ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸಲಾಗುತ್ತಿದೆ.
