Home ಬೆಂಗಳೂರು ನಗರ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಇದೇ 28 ರಂದು ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನಿಷೇಧ

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಇದೇ 28 ರಂದು ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನಿಷೇಧ

22
0
Bakrid festival: BBMP Ban's animal sacrifice in public places on June 28
Bakrid festival: BBMP Ban's animal sacrifice in public places on June 28

ಬೆಂಗಳೂರು:

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಇದೇ 28 ರಂದು ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಬಿಬಿಎಂಪಿ ಅಧಿನಿಯಮ 2020ರ ಪ್ರಕಾರ ಅನಧಿಕೃತವಾಗಿ ಪ್ರಾಣಿವಧೆ ನಿರ್ಭಂಧಿಸಲಾಗಿದೆ ಮತ್ತು ಕಾನೂನು ಉಲ್ಲಂಘಿಸುವವರ ವಿರುದ್ದ ಕ್ರಮ ಜರುಗಿಸಲಾಗುತ್ತದೆ.

ಕರ್ನಾಟಕ ರಾಜ್ಯ ಪ್ರಾಣಿ ಬಲಿ ತಡೆ ಕಾಯ್ದೆ 1959ರ ಸೆಕ್ಷನ್ 3ರ ಪ್ರಕಾರ ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಅಂಥವರಿಗೆ 06 ತಿಂಗಳ ಸಜೆ ಅಥವಾ ದಂಡ ಎರಡೂ ವಿಧಿಸಬಹುದಾಗಿದೆ.

ಸಾರ್ವಜನಿಕರು ಪ್ರಾಣಿವಧೆ ಕಾಯ್ದೆಯ ಪ್ರಕಾರ ವಧೆಗೆ ಅರ್ಹವಾದ ಮತ್ತು ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆಗೆ ಅವಕಾಶವಿರಲಿದೆ.

ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್ 429ರ ಪ್ರಕಾರ ಯಾವುದೇ ಪ್ರಾಣಿಗಳನ್ನು ಅನಧಿಕೃತವಾಗಿ ಕೊಂದರೆ 05 ವರ್ಷ ಜೈಲು ಶಿಕ್ಷೆ ಇದೆ.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರಂತೆ ಯಾವುದೇ ವಯಸ್ಸಿನ ದನ, ಆಕಳು, ಎತ್ತು ಹೋರಿ, ಕರುಗಳನ್ನು ಬಲಿ/ಕುರ್ಬಾನಿ/ವಧೆ ಕೊಡುವುದನ್ನು ನಿಷೇಧಿಸಲಾಗಿದೆ. ಬಲಿ/ ಕುರ್ಬಾನಿ/ ವಧೆಗಾಗಿ ಯಾವುದೇ ವಯಸ್ಸಿನ ದನ, ಆಕಳು, ಎತ್ತು, ಹೋರಿ, ಕರುಗಳನ್ನು ಸಾಗಾಟ ಮಾಡುವುದೂ ಸಹ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಸಾರ್ವಜನಿಕರು ಈ ಬಗ್ಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕೋರಲಾಗಿದೆ. ಜೊತೆಗೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿ ಸಂಖ್ಯೆ 8277100200 ಗೆ ಕರೆ ಮಾಡಿ ದೂರು/ಮಾಹಿತಿ ನೀಡಬಹುದಾಗಿದೆ ಎಂದು ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ. ಕೆ.ಪಿ. ರವಿಕುಮಾರ್ ರವರು ತಿಳಿಸಿರುತ್ತಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ಬಕ್ರೀದ್ ಹಬ್ಬ ಆಚರಣೆ/ ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿದಿನಗಳಲ್ಲಿ ಪ್ರಾಣಿವಧೆ ಮತ್ತು ಬಲಿ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಸಾರ್ವಜನಿಕರಲ್ಲಿ ಈ ಮೂಲಕ ತಿಳಿಸುವುದೇನಂದರೇ ರಸ್ತೆಗಳು, ಪಾದಚಾರಿ ಮಾರ್ಗಗಳು, ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಂ ಒಳ ಮತ್ತು ಹೊರ ಆವರಣಗಳು, ಶಾಲೆ ಕಾಲೇಜುಗಳ ಒಳ ಮತ್ತು ಹೊರ ಆವರಣಗಳು, ಆಟದ ಮೈದಾನಗಳಲ್ಲಿ, ದೇವಸ್ಥಾನಗಳು/ಮಸೀದಿಗಳು ಹಾಗೂ ಇತರೆ ಧಾರ್ಮಿಕ ಸ್ಥಳಗಳ ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವ ಇನ್ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಸಂದರ್ಭಗಳಲ್ಲಿ ಅನಧಿಕೃತ ಪ್ರಾಣಿವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇದಿಸಲಾಗಿದೆ.

LEAVE A REPLY

Please enter your comment!
Please enter your name here