ಬೆಂಗಳೂರು:
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸಮಾಜ ಸುಧಾರಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಲೋಕಮಾನ್ಯ ಶ್ರೀ ಬಾಲಗಂಗಾಧರ ತಿಲಕ್ ಅವರ ಜನ್ಮದಿನವನ್ನು ಆಚರಿಸಲಾಯಿತು.
ಶ್ರೀ ಬಾಲಗಂಗಾಧರ ತಿಲಕ್ ಅವರ ಭಾವಚಿತ್ರಕ್ಕೆ ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್ ಕುಮಾರ್ ಸುರಾಣಾ ಹಾಗೂ ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಲೋಕೇಶ್ ಅಂಬೆಕಲ್ಲು ಅವರು ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಸದಸ್ಯರು ಹಾಗೂ ಕಾರ್ಯಾಲಯದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ತಿಲಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
— BJP Karnataka (@BJP4Karnataka) July 23, 2021
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ @arunbpbjp, ರಾಜ್ಯ ಉಪಾಧ್ಯಕ್ಷ ಶ್ರೀ @BlrNirmal ಹಾಗೂ ಪ್ರಮುಖರು ಉಪಸ್ಥಿತರಿದ್ದರು. pic.twitter.com/JxwwEGm1W6