Home ಮೈಸೂರು ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ ಆನೆ ಇನ್ನಿಲ್ಲ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ ಆನೆ ಇನ್ನಿಲ್ಲ

195
0
Balarama, elephant who carried golden ambari 14 times during world famous Mysore Dussehra, is no more
Balarama, elephant who carried golden ambari 14 times during world famous Mysore Dussehra, is no more

ಮೈಸೂರು:

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ ಆನೆ ಅಸುನೀಗಿದೆ.

67 ವರ್ಷದ ಬಲರಾಮ ಆನೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಈ ಹಿನ್ನೆಲೆಯಲ್ಲಿ ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ.

ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿದ್ಧರಿಂದ ಆಹಾರ ಸೇವಿಸಲು ನೀರು‌ ಕುಡಿಯಲು ಆಗದೇ ತೀವ್ರ ಅಸ್ವಸ್ಥಗೊಂಡಿತ್ತು. ಬಲರಾಮನಿಗೆ ಕ್ಷಯ ಇರಬಹುದೆಂದು ವೈದ್ಯರು ಶಂಕಿಸಿದ್ದರು. ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಲಿದೆ.

LEAVE A REPLY

Please enter your comment!
Please enter your name here