Home Uncategorized Ballari Breaking; ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

Ballari Breaking; ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

5
0
Advertisement
bengaluru

ಬಳ್ಳಾರಿ;- ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಜರುಗಿದೆ. ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ.

ಅದೇ ಕಾಲೇಜಿನ ವಿಧ್ಯಾರ್ಥಿ ನವೀನ್ ಎನ್ನುವ ವ್ಯಕ್ತಿಯಿಂದ ಅತ್ಯಾಚಾರ ನಡೆದಿದೆ. ಸಂತ್ರಸ್ತೆ- ಬಿಕಾಂ ವಿದ್ಯಾರ್ಥಿನಿ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ಆರೋಪಿಗಳಲ್ಲಿ ಒಬ್ಬಾತ ಆಕೆಯ ಸಹೋದರ ಎಂದು ಹೇಳಿಕೊಂಡು, ಪರೀಕ್ಷೆ ಬರೆಯುತ್ತಿದ್ದಾಗ ಯುವತಿಯನ್ನು ತರಗತಿಯಿಂದ ಹೊರಗೆ ಕರೆದಿದ್ದಾನೆ.

ನಂತರ ಆಕೆಯನ್ನು ಬಲವಂತವಾಗಿ ಆಟೋದಲ್ಲಿ ಹತ್ತಿಸಿಕೊಂಡು ಕೊಪ್ಪಳ ಜಿಲ್ಲೆಯ ಸಣಾಪುರದ ಹೋಟೆಲ್ ಕೊಠಡಿಗೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಗೆ ಮಾದಕ ದ್ರವ್ಯ ಬೆರೆಸಿದ ಬಿಯರ್ ಕುಡಿಯುವಂತೆ ಒತ್ತಾಯಿಸಿದ್ದಾರೆ. ಯುವತಿ ಪ್ರಜ್ಞೆ ತಪ್ಪುತ್ತಿದ್ದಂತೆ ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

bengaluru bengaluru

ಪ್ರಜ್ಞೆ ಬಂದ ಮೇಲೆ ಸಂತ್ರಸ್ತೆ ನವೀನ್, ಸಕೀಬ್, ತನು ಹಾಗೂ ಮತ್ತೊಬ್ಬ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿಗಳೆಲ್ಲರೂ ಬಳ್ಳಾರಿಯ ಕೌಲ್ ಬಜಾರ್ ನಿವಾಸಿಗಳು.

ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.

The post Ballari Breaking; ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ appeared first on Ain Live News.


bengaluru

LEAVE A REPLY

Please enter your comment!
Please enter your name here