Home ಬೆಂಗಳೂರು ನಗರ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ

ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ

142
0
Ban on use of mobile phones in temples under Karnataka Religious Endowment Department
Ban on use of mobile phones in temples under Karnataka Religious Endowment Department

ಬೆಂಗಳೂರು:

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಡಿ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈ ಬಳಕೆ ಮೇಲೆ ನಿಷೇಧ ಹೇರುವಂತೆ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿರುವ ಕಾರಣ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಬಳಕೆ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗಳಿಗೂ ಹಾಗೂ ದೇವ ದರ್ಶನಕ್ಕೆ ಬರುವ ಭಕ್ತರಿಗೂ ತೊಂದರೆಯಾಗುತ್ತಿರುವ ಹಿನ್ನೆಲೆ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಭಕ್ತರು ದೇವಾಲಯಗಳ ಸೂಚನಾ ಫಲಕಗಳಲ್ಲಿ ಉಲ್ಲೇಖಿಸಿರುವ ಸೂಚನೆಗಳನ್ನು ಪಾಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಮನವಿ ಮಾಡಿದೆ.

ಈ ಬಗ್ಗೆ ಸೂಚನಾ ಪತ್ರದಲ್ಲಿ ಮಾಹಿತಿ ನೀಡುವಂತೆ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here