ಬೆಂಗಳೂರು:
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಾಗೂ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಪುಟ್ಟಣ್ಣ ಅವರಿಂದ ತೆರವಾಗಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ (Bangalore teachers constituency) ಭಾರತೀಯ ಚುನಾವಣಾ ಆಯೋಗವು ಫೆ.16ರಂದು ಉಪ ಚುನಾವಣೆ ಘೋಷಣೆ ಮಾಡಿದೆ.
ಜ.23ರಂದು ಚುನಾವಣೆಯ ಅಧಿಸೂಚನೆ ಹೊರಬೀಳಲಿದ್ದು, ಜ.30ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜ.31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಫೆ.2ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಫೆ.16ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
ಫೆ.20ರಂದು ಮತಗಳ ಎಣಿಕೆ ನಡೆಯಲಿದೆ. ಫೆ.23ರಂದು ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.