Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • BWSSB | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲಮಂಡಳಿಯಿಂದ ವಿನೂತನ ಯೋಜನೆ – ಸಂಚಾರಿ ಕಾವೇರಿ – ಕಾವೇರಿ ಆನ್‌ ವ್ಹೀಲ್ಸ್‌ ಅನುಷ್ಠಾನಕ್ಕೆ ಸಿದ್ದತೆ
  • ಬೆಂಗಳೂರು ನಗರ

BWSSB | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲಮಂಡಳಿಯಿಂದ ವಿನೂತನ ಯೋಜನೆ – ಸಂಚಾರಿ ಕಾವೇರಿ – ಕಾವೇರಿ ಆನ್‌ ವ್ಹೀಲ್ಸ್‌ ಅನುಷ್ಠಾನಕ್ಕೆ ಸಿದ್ದತೆ

The Bengaluru Live April 3, 2025 7:34 PM 1 minute read
BWSSB logo

BWSSB: ಸೆಪ್ಟೆಂಬರ್ 12ರಂದು ನಡೆಯಬೇಕಿದ್ದ ನೇರ ಫೋನ್ ಇನ್ ಕಾರ್ಯಕ್ರಮ ಮುಂದೂಡಿಕೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ
  • ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌ ಅವರ ನಿರ್ದೇಶನ
  • ಖಾಸಗಿ ಟ್ಯಾಂಕರ್ ಗಳ ಬೆಲೆ ಏರಿಕೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಹೊಸ ಯೋಜನೆ
  • ಸಂಚಾರಿ ಕಾವೇರಿ – ಕಾವೇರಿ ವಾಟರ್‌ ಆನ್‌ ವ್ಹೀಲ್ಸ್‌ ಮೂಲಕ ಮನೆ ಬಾಗಿಲಿಗೆ ನೀರು ಸರಬರಾಜು
  • ಸದರಿ ಯೋಜನೆಯಲ್ಲಿ ಜಲಮಂಡಳಿಗೆ ಬಾಡಿಗೆ ಆಧಾರದಲ್ಲಿ ಟ್ಯಾಂಕರ್‌ ನೀಡಲು ಇಚ್ಚಿಸಿರುವ ಟ್ಯಾಂಕರ್‌ ಮಾಲೀಕರು, ನೇರವಾಗಿ ಈ ಪ್ಲಾಟ್‌ಫಾರಂ ಗಳಲ್ಲಿ ನೊಂದಣಿಗೆ ಅವಕಾಶ
  • 110 ಹಳ್ಳಿಗಳಲ್ಲಿ ಹಾಗೂ ಕಾವೇರಿ ಸಂಪರ್ಕಕ್ಕೆ ಅರ್ಜಿಸಲ್ಲಿಸಿರುವ ಅರ್ಜಿದಾರರಿಗೆ ಸಂಪರ್ಕ ಕಾಮಗಾರಿ ಪ್ರಗತಿಯಲ್ಲಿರುವ ಆದ್ಯತೆ
  • ಸದ್ಯದಲ್ಲೇ ಉಪಮುಖ್ಯಮಂತ್ರಿಗಳಿಂದ ಚಾಲನೆ

ಬೆಂಗಳೂರು ಏಪ್ರಿಲ್‌ 03 : ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಮಾಡಿದ ಜನರ ಮನೆಬಾಗಿಲಿಗೆ ಬಿಐಎಸ್‌ ಪ್ರಾಮಾಣೀಕೃತ ಶುದ್ದ ಕುಡಿಯುವ ನೀರನ್ನು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವ ವಿನೂತನ ಯೋಜನೆ ಸಂಚಾರಿ ಕಾವೇರಿ – ಕಾವೇರಿ ಆನ್‌ ವ್ಹೀಲ್ಸ್‌ ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಜಲಮಂಡಳಿ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಬೇಸಿಗೆಯಲ್ಲಿ ಅಂತರ್ಜಲಮಟ್ಟ ಕಡಿಮೆಯಾದಾಗ ನೀರಿನ ಕೊರತೆ ಹೆಚ್ಚಾಗುತ್ತದೆ. ಈ ಸಂಧರ್ಭದಲ್ಲಿ ಖಾಸಗಿ ಟ್ಯಾಂಕರ್‌ಗಳು ತಮ್ಮ ದರವನ್ನು ಹೆಚ್ಚಿಸುವುದರಿಂದ ಜನಸಾಮಾನ್ಯರಿಗೆ ಇನ್ನಷ್ಟು ತೊಂದರೆಯಾಗುತ್ತದೆ. ಈ ತೊಂದರೆಯಿಂದ ತಪ್ಪಿಸುವ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ರೂಪಿಸುವಂತೆ ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಬಿಐಎಸ್‌ ಪ್ರಾಮಾಣೀಕೃತ ಶುದ್ದ ಕುಡಿಯುವ ನೀರನ್ನು ಜನರ ಮನೆಬಾಗಿಲಿಗೆ ತಲುಪಿಸುವ ವಿನೂತನ ಯೋಜನೆಯಾಗಿರುವ “ಸಂಚಾರಿ ಕಾವೇರಿ – ಕಾವೇರಿ ಆನ್‌ ವ್ಹೀಲ್ಸ್‌” ಅನ್ನು ಅನುಷ್ಠಾನಗೊಳಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಆಪ್‌ ಹಾಗೂ ವೆಬ್‌ಸೈಟ್‌ ರೂಪಿಸಲಾಗಿದೆ.

ಸಂಚಾರಿ ಕಾವೇರಿ – ಕಾವೇರಿ ಆನ್‌ ವ್ಹೀಲ್ಸ್‌ ಯೋಜನೆಯ ಪ್ರಮುಖ ಅಂಶಗಳು :
⦁ಟ್ಯಾಂಕರ್‌ ಟ್ರಾಕಿಂಗ್‌, ಓಟಿಪಿ ಪ್ರೊಟೆಕ್ಟೆಡ್‌ ಸೇವೆ
⦁ಬೆಂಗಳೂರು ನಾಗರೀಕರು ಆನ್‌ ಡಿಮ್ಯಾಂಡ್‌ ಟ್ಯಾಂಕರ್‌ ನೀರು ಬುಕ್ಕಿಂಗ್‌ ಮಾಡಲು ಅವಕಾಶ
⦁ಬಿಐಎಸ್‌ ಪ್ರಮಾಣಿತ ಶುದ್ದ ಹಾಗೂ ಸ್ವಚ್ಚ ಕುಡಿಯುವ ನೀರು ಲಭ್ಯ
⦁ಸಕಾಲದಲ್ಲಿ ಸರಿಯಾದ ಪ್ರಮಾಣದಲ್ಲಿ ನೀರು ನೀಡುವ ವ್ಯವಸ್ಥೆ
⦁ದರ ಏರಿಕೆಯ ಭಯವಿಲ್ಲದೇ ಜನರು ನಿಗದಿತ ರಿಯಾಯತಿ ದರದಲ್ಲಿ ಟ್ಯಾಂಕರ್‌ ನೀರು ಬುಕ್ಕಿಂಗ್‌ ಗೆ ಅವಕಾಶ
⦁ಯಾವುದೇ ಸರ್‌ಚಾರ್ಜ್‌, ಬೇಡಿಕೆ ಹೆಚ್ಚಾಗುವ ಛಾರ್ಜ್‌ಗಳ ಭಯವಿಲ್ಲ

ಅತ್ಯಂತ ಸುಲಭ ವಿಧಾನದಲ್ಲಿ ಜನರು ತಮಗೆ ಅಗ್ಯವಿರುವಷ್ಟು ನೀರನ್ನು ಬುಕ್ಕಿಂಗ್‌ ಮಾಡಲು ಇಲ್ಲಿ ಅನುವು ಮಾಡಲಾಗಿದೆ. ಕಾವೇರಿ ಕನೆಕ್ಟ್‌ ಸೆಂಟರ್‌ಗಳಿಂದ ಬಿಐಎಸ್‌ ಪ್ರಮಾಣೀಕೃತ ಶುದ್ದ ನೀರನ್ನು ಮನೆಬಾಗಿಲಿಗೆ ತಲುಪಿಸುವುದು ನಮ್ಮ ಉದ್ದೇಶವಾಗಿದೆ. ಗ್ರಾಹಕರು ನೇರವಾಗಿ ನಮ್ಮ ಆನ್‌ಲೈನ್‌ ಪ್ಲಾಟ್‌ಫಾರಂಗಳ ಮೂಲಕ ಹಣಪಾವತಿಸಿ ಟ್ಯಾಂಕರ್‌ ಬುಕ್ಕಿಂಗ್‌ ಮಾಡಲು ಅವಕಾಶ ನೀಡಲಾಗಿದೆ ಎಂದು ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಇದೊಂದು ವಿಶೇಷ ಹಾಗೂ ವಿನೂತನ ಯೋಜನೆಯಾಗಿದೆ. ದೇಶದ ಯಾವುದೇ ಜಲಮಂಡಳಿಯೂ ಇದುವರೆಗೂ ಪ್ರಾರಂಭಿಸದೇ ಇರುವಂತಹ ಹೊಸ ಯೋಜನೆ ಇದಾಗಿದ್ದು, ನಮ್ಮಲ್ಲಿ ಲಭ್ಯವಿರುವಂತಹ ನೀರನ್ನು ಅಗತ್ಯವಿರುವ ಜನರಿಗೆ ಸರಬರಾಜು ಮಾಡುವ ವ್ಯವಸ್ಥೆ ಇದಾಗಿದೆ. ಖಾಸಗಿ ಟ್ಯಾಂಕರ್‌ಗಳು ಪೂರೈಸುವಂತಹ ನೀರಿನ ಗುಣಮಟ್ಟ, ಅವುಗಳ ಅಳತೆಯಲ್ಲಿ ವ್ಯತ್ಯಾಸ, ಬೇಡಿಕೆ ಹೆಚ್ಚಾದಾಗ ದರ ಹೆಚ್ಚಳ ಈ ಎಲ್ಲಾ ಸಮಸ್ಯೆಗಳನ್ನು ಏಕಕಾಲದಲ್ಲಿ ಪರಿಹರಿಸುವ ಯೋಜನೆ ಇದಾಗಿದೆ. ಸಾರ್ವಜನಿಕರು ಟ್ಯಾಂಕರ್‌ ಬುಕ್ಕಿಂಗ್‌ ಗೆ ಅವಕಾಶ ನೀಡುವ ಸೇವೆಗೆ ಸದ್ಯದಲ್ಲೇ ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌ ಅವರು ಚಾಲನೆ ನೀಡಲಿದ್ದಾರೆ ಎಂದು ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

110 ಹಳ್ಳಿಗಳಿಗೆ ಹಾಗೂ ಕಾವೇರಿ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿರುವ ಅರ್ಜಿದಾರರಿಗೆ ಆದ್ಯತೆ:
110 ಹಳ್ಳಿಗಳ ವ್ಯಾಪ್ತಿಯಲ್ಲಿ ಕಾವೇರಿ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದು, ಸಂಪರ್ಕದ ಕಾಮಗಾರಿ ಪ್ರಗತಿಯಲ್ಲಿರುವಂತವರಿಗೆ ಹಾಗೂ ಅರ್ಜಿದಾರರಿಗೆ ಆದ್ಯತೆ ನೀಡಲಾಗುವುದು ಎಂದು ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಟ್ಯಾಂಕರ್‌ ಮಾಲೀಕರ ನೊಂದಣಿಗೆ ಅವಕಾಶ: ನಗರದ ಹಲವಷ್ಟು ಪ್ರದೇಶಗಳಲ್ಲಿ ಈಗಾಗಲೇ ಟ್ಯಾಂಕರ್‌ಗಳು ದರ ಏರಿಕೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳಾಗಿವೆ. ಅಲ್ಲದೇ ಕೆಲವು ಕಡೆಗಳಲ್ಲಿ ಟ್ಯಾಂಕರ್‌ಗಳಿಗೆ ಬೇಡಿಕೆ ಇಲ್ಲದ ಬಗ್ಗೆಯೂ ಮಾಹಿತಿಗಳಿವೆ. ಬೆಂಗಳೂರು ಜಲಮಂಡಳಿಯ ಬಳಿ ಸಾಕಷ್ಟು ಪ್ರಮಾಣದಲ್ಲಿ ನೀರಿನ ಲಭ್ಯತೆಯಿದೆ. 110 ಹಳ್ಳಿಗಳ ವ್ಯಾಪ್ತಿಯಲ್ಲಿ ಹಾಗೆಯೇ ಟ್ಯಾಂಕರ್‌ಗಳ ಮೇಲೆ ಅವಲಂಬಿತರಾಗಿರುವ ಜನರಿಗೆ ಉತ್ತಮ ನೀರನ್ನು ಒದಗಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ಖಾಸಗಿ ಟ್ಯಾಂಕರ್‌ಗಳ ಮಾಲೀಕರು ನಮ್ಮ ಸಂಚಾರಿ ಕಾವೇರಿ ಪ್ಲಾಟ್‌ಫಾರಂನಲ್ಲಿ ನೊಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸೇವೆಯನ್ನು ಒದಗಿಸಲು ಖಾಸಗಿ ಟ್ಯಾಂಕರ್‌ನವರು ಜಲಮಂಡಳಿಗೆ ತಮ್ಮ ಟ್ಯಾಂಕರ್‌ ಗಳನ್ನು ಬಾಡಿಗೆ ಆಧಾರದಲ್ಲಿ ನೀಡಬಹುದಾಗಿದೆ. ಸದರಿ ಯೋಜನೆಯಲ್ಲಿ ಜಲಮಂಡಳಿಗೆ ಬಾಡಿಗೆ ಆಧಾರದಲ್ಲಿ ಟ್ಯಾಂಕರ್‌ ನೀಡಲು ಇಚ್ಚಿಸಿರುವ ಟ್ಯಾಂಕರ್‌ ಮಾಲೀಕರು, ನೇರವಾಗಿ ಈ ಪ್ಲಾಟ್‌ಫಾರಂ ಗಳಲ್ಲಿ ನೊಂದಣಿ ಮಾಡಿಕೊಂಡು ಸೇವೆಯನ್ನು ಒದಗಿಸಬಹುದಾಗಿದೆ. ಏಪ್ರಿಲ್‌ 10 ರ ವರೆಗೆ ಟ್ಯಾಂಕರ್‌ಗಳು ನೊಂದಣಿ ಮಾಡಿಕೊಳ್ಳಬಹುದು ಎಂದು ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಟ್ಯಾಂಕರ್‌ ನೊಂದಣಿಗೆ https://bwssb.karnataka.gov.in/ ಜಾಲತಾಣದಲ್ಲಿ ಅವಕಾಶ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮುಖ್ಯ ಅಭಿಯಂತರರು (ಗುಣ & ವಿನ್ಯಾಸ ಆಶ್ವಾಸನೆ) ಸನತ್‌ ಕುಮಾರ್‌ ವಿ ಮೊ: +91 99018 88338 ಅವರನ್ನು ಸಂಪರ್ಕಿಸಬಹುದಾಗಿದೆ

About the Author

The Bengaluru Live

Administrator

Visit Website View All Posts

Post navigation

Previous: Bangalore Rains | ಮುಂಗಾರು ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮವಹಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೂಚನೆ
Next: ಬೆಂಗಳೂರು ನಗರ ವಿಶ್ವವಿದ್ಯಾನಿಲಯಕ್ಕೆ ಪರಾಗ್ವೆ-ಕಾಂಬೋಡಿಯ ನಿಯೋಗ ಭೇಟಿ – ಶೈಕ್ಷಣಿಕ ಸಹಭಾಗಿತ್ವ ಕುರಿತು ಪ್ರಸ್ತಾಪ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM
ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

November 12, 2026 7:04 PM
ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ ಓಕಳಿಪುರಂ ಎಂಟು ಪಥದ ಕಾರಿಡಾರ್ ಬಳಿ ರಾತ್ರಿ ಡಾಂಬರೀಕರಣ ಕಾಮಗಾರಿಯಲ್ಲಿ ರಸ್ತೆ ರೋಲರ್
  • ಬೆಂಗಳೂರು

ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ

November 12, 2026 3:58 PM
ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಕೃಷ್ಣ ಬೈರೇಗೌಡ ಮತ್ತು ಅಧಿಕಾರಿಗಳು
  • ಬೆಂಗಳೂರು

ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ

November 12, 2026 3:50 PM

ನೀವು ತಪ್ಪಿಸಿಕೊಂಡಿರಬಹುದು

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM
bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

The Bengaluru Live November 12, 2026 7:04 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
  • ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್
  • ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ
  • ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ
©Copyright 2025 The Bengaluru Live All rights reserved. | MoreNews by AF themes.