ಬೆಂಗಳೂರು:
ಕೋವಿಡ್-19 ರ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಆದೇಶದ ಮೇರೆಗೆ ದಿನಾಂಕ: 28-04-2021 ರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವವನವನ್ನು ಸಾರ್ವಜನಿಕರ ವೀಕ್ಷಣೆಗೆ ಮುಚ್ಚಲಾಗಿದ್ದು,ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ 113 ನೇ ತಾಂತ್ರಿಕ ಸಲಹಾ ಸಮಿತಿಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನವನ್ನು ಸಾರ್ವಜನಿಕರ ವೀಕ್ಷಣೆಗೆ ಅನುವು ಮಾಡಿಕೊಡುವ ಸಲುವಾಗಿ ಮಾದರಿ ಕಾರ್ಯನಿರ್ವಾಹಣಾ ವಿಧಾನವನ್ನು ಅನುಮೋದನೆ ನೀಡಿರುವುದರಿಂದ ಜುಲೈ1 ರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.