Home Uncategorized BAPS Swaminarayan Akshardham: ವಿಶ್ವದ ಅತೀ ದೊಡ್ಡ ಹಿಂದೂ ದೇಗುಲ ಅಮೆರಿಕದಲ್ಲಿ ಉದ್ಘಾಟನೆ..!

BAPS Swaminarayan Akshardham: ವಿಶ್ವದ ಅತೀ ದೊಡ್ಡ ಹಿಂದೂ ದೇಗುಲ ಅಮೆರಿಕದಲ್ಲಿ ಉದ್ಘಾಟನೆ..!

41
0

ವಾಷಿಂಗ್ಟನ್: ಭಾರತದ ಹೊರಗಿನ ಅತಿ ದೊಡ್ಡ ಹಿಂದೂ ದೇವಾಲಯ ಅಮೆರಿಕದಲ್ಲಿ ಉದ್ಘಾಟನೆ ಗೊಂಡಿದೆ. BAPS ಸ್ವಾಮಿನಾರಾಯಣ ಅಕ್ಷರಧಾಮ (BAPS Swaminarayan Akshardham) ದೇವಾಲಯವು ಅಮೆರಿಕದ (America) ನ್ಯೂಜೆರ್ಸಿಯಲ್ಲಿ ಭಕ್ತಾದಿಗಳಿಗೆ ಬಾಗಿಲು ತೆರೆಯಿತು.

Underneath the canvas of the night sky, Akshardham Mahamandir shines in celestial splendor during the Grand Dedication Ceremony. A breathtaking fusion of devotion and celebration. #AkshardhamOpening2023 pic.twitter.com/T1007h5hCh

— akshardhamusa (@akshardham_usa) October 9, 2023

ನ್ಯೂಜೆರ್ಸಿಯ (New Jersey) ರಾಬಿನ್ಸ್‌ವಿಲ್ಲೆ ನಗರದಲ್ಲಿರುವ ಈ ದೇವಾಲಯವು ಆಧುನಿಕ ಯುಗದಲ್ಲಿ ಭಾರತದ ಹೊರಗಿನ ಅತಿದೊಡ್ಡ ಹಿಂದೂ ದೇವಾಲಯವಾಗಿದೆ ಎಂದು ಹೇಳಲಾಗುತ್ತದೆ. ಬಿಎಪಿಎಸ್‌ ಸ್ವಾಮಿನಾರಾಯಣ ಅಕ್ಷರಧಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ‘ವಿಶ್ವದಾದ್ಯಂತ ಅಪಾರ ಸಂಖ್ಯೆಯ ಭಕ್ತರಿಗೆ ಇದು ಆಧ್ಯಾತ್ಮಿಕ ಮಹತ್ವದ ಸಂದರ್ಭವಾಗಿದೆ’ ಎಂದು ಮೋದಿ ಬಣ್ಣಿಸಿದ್ದಾರೆ.

MP Renukacharya: ಮೋಸ ಮಾಡಿದ ವಚನಭ್ರಷ್ಟರೊಂದಿಗೆ ಮೈತ್ರಿ ಎಷ್ಟು ಸರಿ?: ರೇಣುಕಾಚಾರ್ಯ

ಈ ದೇವಾಲಯವನ್ನು ಇಟಲಿ ಮತ್ತು ಬಲ್ಗೇರಿಯಾದ ವಿಧದ ಅಮೃತಶಿಲೆಯಿಂದ ರಚಿಸಲಾಗಿದೆ. ಈ ವಾಸ್ತುಶಿಲ್ಪದ ದೇವಾಲಯವು ವಿಶಾಲವಾದ 126 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ. ದೇವಾಲಯದ ಗೋಡೆಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಅಬ್ರಹಾಂ ಲಿಂಕನ್ ಸೇರಿದಂತೆ ಐತಿಹಾಸಿಕ ವ್ಯಕ್ತಿಗಳ ಪ್ರತಿರೂಪವನ್ನು ಕೆತ್ತನೆ ಮಾಡಲಾಗಿದೆ ಎಂದು ದೇವಾಲಯದ ಸ್ವಯಂಸೇವಕ ಮತ್ತು ಕೊಲಂಬಿಯಾ ವಿಶ್ವವಿದ್ಯಾನಿಲಯದ ಧಾರ್ಮಿಕ ವಿದ್ವಾಂಸ ಯೋಗಿ ತ್ರಿವೇದಿ ತಿಳಿಸಿದ್ದಾರೆ.

The post BAPS Swaminarayan Akshardham: ವಿಶ್ವದ ಅತೀ ದೊಡ್ಡ ಹಿಂದೂ ದೇಗುಲ ಅಮೆರಿಕದಲ್ಲಿ ಉದ್ಘಾಟನೆ..! appeared first on Ain Live News.

LEAVE A REPLY

Please enter your comment!
Please enter your name here