Home ಮೈಸೂರು ಶ್ರೀ ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್

ಶ್ರೀ ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್

52
0

ಮೈಸೂರು:

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶುಕ್ರವಾರ ಜಗಜ್ಯೋತಿ ಶ್ರೀ ಬಸವೇಶ್ವರರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೋವಿಡ್ ಕಾರಣದಿಂದಾಗಿ ಬಸವಣ್ಣನವರ ಜಯಂತಿಯನ್ನು ಸರಳ ಹಾಗೂ ಸಾಕೇಂತಿಕವಾಗಿ ಪುಷ್ಪಾರ್ಚನೆ ಮಾಡಲಾಗಿದೆ. ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಆಶಯದಂತೆ ಇಂದು ಎಲ್ಲರೂ ನಿಸ್ವಾರ್ಥದಿಂದ ಕೆಲಸ ಮಾಡಬೇಕಾಗಿದೆ ಎಂದರು.

ಬಸವಣ್ಣನವರು ಹೇಳಿದ ಕಾಯಕವೇ ಕೈಲಾಸ ಎಂಬ ಮಾತಿನಂತೆ ಇಂದು ವೈದ್ಯರು, ಶುಶ್ರೂಷಕರು ವಾರದ 24ಗಂಟೆಯು ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸೇವೆಯನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಹೇಳಿದರು.

ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ತಮ್ಮ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಇವರ ಮೇಲೆ ಯಾರಾದರೂ ಹಲ್ಲೆಗೆ ಮುಂದಾದರೆ ಕ್ರಮ ಕೈಗೊಳ್ಳಲು ಸೂಚಿಸಿದರು

ಬ್ಲಾಕ್ ಫಂಗಸ್ ಬಗ್ಗೆ ಮೈಸೂರಿನಲ್ಲೂ ನಿಗಾವಹಿಸಲಾಗುತ್ತಿದೆ. ಈ ರೀತಿಯ ಸೋಂಕಿಗೆ ಒಳಗಾದವರಿಗೆ ಕೆ.ಆರ್.ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ರೆಮ್ಡಿಸಿವಿರ್ ಇಂಜಕ್ಷನ್ ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಜೆ.ಎಲ್.ಆರ್. ಅಧ್ಯಕ್ಷ ಅಪ್ಪಣ್ಣ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಅಧ್ಯಕ್ಷ ರಘು ಕೌಟಿಲ್ಯ, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥಸ್ವಾಮಿ, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here