ಬೆಂಗಳೂರು;- ಮೊಣಕಾಲು ನೋವಿನಿಂದ ಬಳಲುತ್ತಿದ್ದ ಮಾಜಿ ಸಿಎಂ ಬೊಮ್ಮಾಯಿ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಸಿಎಂ ಆಗಿದ್ದ ಸಂದರ್ಭದಲ್ಲಿ ಕೂಡ ಬಸವರಾಜ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ಮೊಣಕಾಲು ನೋವು ಕಡಿಮೆಯಾಗದ ಕಾರಣ, ವೈದ್ಯರ ಸಲಹೆ ಮೇರೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, “ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
The post Basavaraj Bommai: ಅನಾರೋಗ್ಯದ ಹಿನ್ನೆಲೆ- ಮಾಜಿ ಸಿಎಂ ಬೊಮ್ಮಾಯಿ ಆಸ್ಪತ್ರೆಗೆ ದಾಖಲು appeared first on Ain Live News.