ಬೆಂಗಳೂರು:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಲಿಂಗಾಯತ ಸಮುದಾಯದ ಉಪಪಂಗಡ ಪಂಚಮಸಾಲಿ ವರ್ಗಕ್ಕೆ ಮೀಸಲಾತಿ ಘೋಷಿಸುವ ಬಗ್ಗೆಯೂ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.
ಸಂಜೆ 4 ಗಂಟೆಗೆ ಸಭೆ ನಡೆಯಲಿದೆ ಮತ್ತು ಎಲ್ಲಾ ಸಚಿವರು ಹಾಜರಿರಲು ತಿಳಿಸಲಾಗಿದೆ.
ಸರ್ಕಾರ ಮೀಸಲಾತಿ ನೀಡುವ ವಿಶ್ವಾಸವಿದೆ ಎಂದು ಪಂಚಮಸಾಲಿ ಶ್ರೀಗಳಾದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.