Home ಬೆಂಗಳೂರು ನಗರ ಲಾಠಿ ಪ್ರಯೋಗ ಮಾಡದೆ ಬಿಗಿ ಕ್ರಮ ಕೈಗೊಳ್ಳಲು ಬಸವರಾಜ್ ಬೊಮ್ಮಾಯಿ ಸೂಚನೆ

ಲಾಠಿ ಪ್ರಯೋಗ ಮಾಡದೆ ಬಿಗಿ ಕ್ರಮ ಕೈಗೊಳ್ಳಲು ಬಸವರಾಜ್ ಬೊಮ್ಮಾಯಿ ಸೂಚನೆ

62
0
Advertisement
bengaluru

ಬೆಂಗಳೂರು:

ಬೆಂಗಳೂರು ಲಾಕ್ಡೌನ್ ಸಂದರ್ಭದಲ್ಲಿ ಜನರ ಮೇಲೆ ಲಾಠಿ ಪ್ರಯೋಗ ಮಾಡದೆ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು‌.

ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅನುಕೂಲಕ್ಕಾಗಿಯೇ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರ ಅರ್ಥ ಹಿಂಸೆ ಕೊಡಬೇಕು ಎಂಬುದು ಅಲ್ಲ. ಹೀಗಾಗಿ ಲಾಠಿ ಪ್ರಯೋಗ ಬೇಡ ಅದರ ಬದಲಿಗೆ ಕಾನೂನನ್ನು ಕಟ್ಟುನಿಟ್ಟಾಗಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.

ನಾನು ಜನರಿಗೆ ಮನವಿ ಮಾಡಿಕೊಳ್ಳುವುದು ಇಷ್ಟೇ ಪೊಲೀಸರಿಗೆ ಅನಿವಾರ್ಯ ಪರಿಸ್ಥಿತಿಯನ್ನು ತರಬೇಡಿ. ಜನ ಸಹಕಾರ ನೀಡಿದರೆ. ನಾವು ಸಹಕಾರ ನೀಡುತ್ತೇವೆ ಎಂದು ಅವರು ತಿಳಿಸಿದರು.

bengaluru bengaluru

ಕರ್ಫ್ಯೂ ಉಲ್ಲಂಘಿಸುವವರ ವಿರುದ್ಧ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಬೇಕು ಮತ್ತು ಲಾಠಿಚಾರ್ಜ್‌ಗೆ ಆಶ್ರಯಿಸಬಾರದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಪೊಲೀಸ್ ಸಿಬ್ಬಂದಿಗೆ ಸೂಚಿಸಿದ್ದಾರೆ.

ಪಂತ್ ಟ್ವೀಟ್ ಮಾಡಿದ್ದಾರೆ: “ಒಂದು ವೇಳೆ ಸಾರ್ವಜನಿಕರು ಲಾಕ್ ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ @BlrCityPolice ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಎಂಬ ಸೂಚನೆ ನೀಡಲಾಗಿದೆ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ಕೊರೊನ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ.”

ಮತ್ತೊಂದು ಟ್ವೀಟ್‌ನಲ್ಲಿ: “ಲಾಕ್ ಡೌನ್ ಜಾರಿಯಾಗಿರುವ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಒಪ್ಪಿಗೆ ನೀಡಲಾದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಥವಾ ಕೆಲಸದ ಸ್ಥಳಕ್ಕೆ ಪ್ರಯಾಣಿಸುವ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಾದಲ್ಲಿ ಡಿಸಿಪಿ ಇಂಟಲಿಜೆನ್ಸ್ ಶ್ರೀ.ಸಂತೋಷ್ ಬಾಬು ಅವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-22942354.”


bengaluru

LEAVE A REPLY

Please enter your comment!
Please enter your name here