Basavaraj Bommai Reacts on Karnataka Contractor Association | Contractor Association is a Government Commission Collection Centre: Basavaraja Bommai
ಬೆಂಗಳೂರು:
ಗುತ್ತಿಗೆದಾರರ ಸಂಘದವರು ನಮ್ಮ ಮೆಲೆ ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡಿದ್ದರು. ಈಗ ಕಾಂಟ್ರಾಕ್ಟರ್ ಅಸೋಷಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಶನಿವಾರ ಮಾಧ್ಯಮಗಳಿಗೆ ಮಾತನಾಡಿದ ಅವರು, ಈ ಹಿಂದೆ ಇದೇ ವ್ಯಕ್ತಿ ಲಂಚ ಕೊಟ್ಟಿರುವ ಆರೋಪ ಬಂದಾಗ ಆತ ನಾನು ಕಾಂಟ್ರಾಕ್ಟ್ ಮಾಡಿಲ್ಲ ಅಂತ ಹೇಳಿದ್ಸರು. ಕಾಂಟ್ರಾಕ್ಟರ್ ಮತ್ತು ಸರ್ಕಾರ ಒಂದಾಗಿ ರಾಜ್ಯ ಲೂಟಿ ಮಾಡಿದ್ದಾರೆ. ಅಕ್ರಮ ಹಣ ಸಂಗ್ರಹದ ಹಿನ್ನೆಲೆಯಲ್ಲಿ ಮನಿ ಲ್ಯಾಂಡರಿಂಗ್ ಆಕ್ಟನಲ್ಲಿ ಇಡಿ ತನಿಖೆ ಆಗಬೇಕು. ಭ್ರಷ್ಟಾಚಾರ ಕಾಯ್ದೆಯಡಿ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಕಮಿಷನ್ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾರಾದರೂ ನೋಡಿದ್ದೀರಾ ಅಂತ ಕೇಳಿದ್ದಾರೆ. ನಮ್ಮ ಸರ್ಕಾರದ ವಿರುದ್ದ 40% ಆರೋಪ ಮಾಡಿದಾಗ ನೀವು ನೋಡಿದ್ದೀರಾ ? ಈ ಪ್ರಕರಣದಲ್ಲಿ ಮುಖ್ಯಮಂತ್ರಿಯ ಯಾವುದೇ ಪಾತ್ರ ಇಲ್ಲದಿದ್ದರೆ, ನೀವೇ ನೇಮಿಸಿರುವ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗಕ್ಕೆ ಈ ಪ್ರಕರಣ ನೀಡಬೇಕು. ಇಲ್ಲವೇ ಲೋಕಾಯುಕ್ತಕ್ಕೆ ನೀಡಬೇಕು. ಈ ಪ್ರಕರಣದ ಮೂಲ ಪತ್ತೆ ಆಗಬೇಕಾದರೆ ತನಿಖೆ ಆಗಬೇಕು ಎಂದು ಹೇಳಿದರು.
ಐದು ರಾಜ್ಯದ ಚುನಾವಣೆಗೆ ಎಟಿಎಂ ಥರಾ ಕೆಲಸ ಮಾಡುತ್ತಿರುವ ನೀವು ಭ್ರಷ್ಟಾಚಾರದ ವಿರುದ್ದ ಮತನಾಡುವ ನೈತಿಕತೆ ಇಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರೇ 42 ಕೊಟಿ ರೂಮಸಿಕ್ಕಿರುವುದಕ್ಕೂ ಸಿಎಂ ಭೇಟಿ ಮಾಡಿದ್ದಾರೆ. ಸೆಲೆಕ್ಟಿವ್ ಆಗಿ ಪೇಮೆಂಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದೇ ಭ್ರಷ್ಟಾಚಾರದ ಪುರಾವೆಯಾಗಿದೆ. ಲಂಚ ಕೊಟ್ಟವರಿಗೆ ಬಿಲ್ ಬಿಡುಗಡೆ ಮಾಡುತ್ತಿದ್ದಾರೆ. ಇದನ್ನು ಮುಖ್ಯಮಂತ್ರಿಗಳು ಸರಿ ಪಡಿಸುವುದಾಗಿ ಹೇಳಿದ್ದಾರೆ. ಅಂದರೆ ಭ್ರಷ್ಟಾಚಾರ ನಡೆದಿದೆ ಎನ್ನುವುದು ಅವರು ಒಪ್ಪಿಕೊಂಡಂತಾಗಿದೆ ಎಂದು ಹೇಳಿದರು.
