‘ಬಿಗ್ ಬಾಸ್ ಕನ್ನಡ ಸೀಸನ್ 9’ (Bigg Boss Kannada Season 9) ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ ಪ್ರತಿ ವಾರವೂ ಒಂದೊಂದು ಬಗೆಯ ಟಾಸ್ಕ್ ನೀಡಲಾಗುತ್ತಿದೆ. ಈವರೆಗೂ ಗಳಿಸಿಕೊಂಡ ಅಂಕಗಳನ್ನು ಉಳಿಸಿಕೊಳ್ಳಲು ಈ ವಾರ ಹೊಸ ಟಾಸ್ಕ್ ನೀಡಲಾಗಿದೆ. ಅದಕ್ಕಾಗಿ ಸ್ಪರ್ಧಿಗಳು ಎಲ್ಲಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಬಿಗ್ ಬಾಸ್ (Bigg Boss Kannada) ಮನೆಯ ನಿಯಮ ಮುರಿದರೆ ಸ್ಪರ್ಧಿಗಳು ಅದಕ್ಕೂ ಅಂಕ ಕಳೆದುಕೊಳ್ಳುತ್ತಾರೆ. ಫಿನಾಲೆಗೆ ಇನ್ನೇನು ಕೆಲವೇ ವಾರಗಳು ಇರುವುದರಿಂದ ಬಹಳಷ್ಟು ಎಚ್ಚರಿಕೆಯಿಂದ ಆಟ ಆಡಬೇಕಾದ ಪರಿಸ್ಥಿತಿ ಇದೆ. ಕಲರ್ಸ್ ಕನ್ನಡ (Colors Kannada) ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದೆ. ಅದರಲ್ಲಿ ಈ ವಾರದ ಟಾಸ್ಕ್ಗಳ ಝಲಕ್ ತೋರಿಸಲಾಗಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.