ಬೆಂಗಳೂರು:
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನ ಘನ ತ್ಯಾಜ್ಯ ನಿರ್ವಹಣೆ ಘಟಕಕ್ಕೆ ಶನಿವಾರ (ಸೆ.16) ಭೇಟಿ ನೀಡಿ, ಸಂಸ್ಕರಣಾ ಘಟಕದ ಕಾರ್ಯವಿಧಾನದ ಕುರಿತು ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬಿಬಿಎಂಪಿ ಕಮಿಷನರ್ ತುಷಾರ್ ಗಿರಿ ನಾಥ್ (ಐಎಎಸ್ ಅಧಿಕಾರಿ), ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ (ಐಎಎಸ್ ಅಧಿಕಾರಿ) ಮತ್ತಿತರರು ಜತೆಗಿದ್ದರು.
ಈ ಸಂದರ್ಭದಲ್ಲಿಇಂದು ಪತ್ರಕರ್ತರೊಂದಿಗೆ ಮಾತನಾಡುತ್ತಾ ಅವರು: “ಬೆಂಗಳೂರಿನಲ್ಲಿ ಉತ್ಪಾದನೆಯಾಗುತ್ತಿರುವ ಕಸಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕಾರಣಕ್ಕೆ, ಗ್ರೇಟರ್ ಹೈದರಾಬಾದ್ ಮಹಾನಗರಪಾಲಿಕೆ ನಿರ್ವಹಣೆ ಮಾಡುವ ಬೃಹತ್ ತ್ಯಾಜ್ಯ ನಿರ್ವಹಣಾ ಘಟಕ ವೀಕ್ಷಣೆಗೆ ಶನಿವಾರ (ಸೆ.16) ಭೇಟಿ ನೀಡಲಾಗಿತ್ತು…
…ಬೆಂಗಳೂರಿನ ಹೊರ ವಲಯದಲ್ಲಿ ಕಸ ವಿಲೇವಾರಿ ಮಾಡಲಾಗುತ್ತಿತ್ತು, ಈಗ ಸುತ್ತಲಿನ ಜನವಸತಿ ಪ್ರದೇಶಗಳು ಬೆಳೆದು ಜನರು ಕಷ್ಟ ಪಡುತ್ತಿದ್ದಾರೆ. ಅಂತರ್ಜಲ, ಪರಿಸರ ಹಾಳಾಗುತ್ತಿದೆ, ಇದಕ್ಕೆ ಪರ್ಯಾಯ ವ್ಯವಸ್ಥೆ ಹೇಗೆ ಮಾಡಬಹುದು ಎಂದು ಅಧ್ಯಯನ ನಡೆಸಲು ಭೇಟಿ ನೀಡಲಾಯಿತು. ಕಸವನ್ನು ರಸ ಮಾಡುವ, ವಿದ್ಯುತ್ ತಯಾರಿಸುವ ತಂತ್ರಜ್ಞಾನ ಇದ್ದು ಅದನ್ನು ರಾಜ್ಯದಲ್ಲಿ ಹೇಗೆ ಅಭಿವೃದ್ಧಿ ಮಾಡಬಹುದು ಎಂದು ಯೋಜನೆ ರೂಪಿಸಲಾಗುವುದು,” ಎಂದು ಹೇಳಿದರು.