ಬೆಂಗಳೂರು:
ಕೋವಿಡ್ ಸಂಕಷ್ಟ ಕಾಲದಲ್ಲೂ ಜನರ ಮೇಲೆ ಯಾವುದೇ ರೀತಿಯ ತೆರಿಗೆ ವಿಧಿಸದ ಬೃಹತ್ ಬೆಂಗಳೂರು ಮಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್ ಜನಪರ ಮತ್ತು ಜನಸ್ನೇಹಿ ಬಜೆಟ್ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬಿಬಿಎಂಪಿ ಬಜೆಟ್ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿರುವ ಅವರು; ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಜನರಿಗೆ ಯಾವುದೇ ಹೊರೆ ಹೇರಲಾಗಿಲ್ಲ. ಬದಲಿಗೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.
ಬಜೆಟ್‌ನಲ್ಲಿ ನಗರದ ಎಲ್ಲ ವಾರ್ಡುಗಳಿಗೆ, ವಲಯಗಳಿಗೆ ಸಮಾನ ಪ್ರಾಮುಖ್ಯತೆ ಕೊಡಲಾಗಿದೆ. ಮುಖ್ಯವಾಗಿ ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಿಬಿಎಂಪಿ ಕಾಯ್ದೆಯನ್ನು ಸರಕಾರ ಜಾರಿಗೆ ತಂದಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಅತ್ಯಂತ ಉತ್ತಮ ನಗರವಾಗಿ ಹೊರಹೊಮ್ಮಲಿದೆ. ಅದಕ್ಕೆ ಅಗತ್ಯವಾದ ಎಲ್ಲ ಉಪಕ್ರಮಗಳನ್ನು ಬಜೆಟ್‌ನಲ್ಲಿ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಇನ್ನು ಇ-ಆಸ್ತಿ ತಂತ್ರಾಂಶದ ಮೂಲಕ ಎ-ಬಿ ಖಾತಾಗಳ ಗೊಂದಲವನ್ನೂ ನಿವಾರಿಸಲು ಪ್ರಯತ್ನಿಸಲಾಗಿದೆ ಎಂದು ಅವರು ಶ್ಲಾಘಿಸಿದರು.
ಇದನ್ನು ಓದು: ಬಿಬಿಎಂಪಿ ಬಜೆಟ್ : ಆಸ್ತಿ ತೆರಿಗೆ ಹೆಚ್ಚಳ ಇಲ್ಲ https://kannada.thebengalurulive.com/bbmp-budget-no-property-tax-increase/